ನವಜಾತ ಹೆಣ್ಣು ಶಿಶು ಪತ್ತೆ

ಸೋಮವಾರ, ಮೇ 27, 2019
24 °C

ನವಜಾತ ಹೆಣ್ಣು ಶಿಶು ಪತ್ತೆ

Published:
Updated:
ನವಜಾತ ಹೆಣ್ಣು ಶಿಶು ಪತ್ತೆ

ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಗುನ್ನಾಳ ಗ್ರಾಮದ ನಂದಿನಗರಲ್ಲಿ ಸೋಮವಾರ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಗ್ರಾಮದ ನಿವಾಸಿ ಶರಣಮ್ಮ ಜೋಳ್ಳಿನ ಎಂಬುವವರು ಮಗುವನ್ನು ರಕ್ಷಿಸಿ ಮನೆಯಲ್ಲಿ ತಾತ್ಕಾಲಿಕ ಆಶ್ರಯ ನೀಡಿದ್ದಾರೆ.

ಮಾಹಿತಿ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ ರೆಡ್ಡಿ, ಸಮಾಜ ಕಾರ್ಯಕರ್ತ ರವಿಕುಮಾರ ಪವಾರ, ಬೇವೂರು ಪೊಲೀಸ್ ಠಾಣೆಯ ಪಿ.ಎಸ್.ಐ ಶಿವರಾಜ್, ಸಿಬಂಧಿಗಳಾದ ರಾಮಣ್ಣ ಅವರು ಸ್ಥಳಕ್ಕೆ ತೆರಳಿ ಮಗುವನ್ನು ವಶಕ್ಕೆ ಪಡೆದು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದರು.

ಬೇವೂರು ಪೊಲೀಸ್ ಠಾಣೆಯ ಪಿ.ಎಸ್.ಐ ಶಿವರಾಜ್ ಮಾತನಾಡಿ, ಪರಿತ್ಯಜಿಸಲ್ಪಟ್ಟ ಮಕ್ಕಳು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಥವಾ ಮಕ್ಕಳ ಸಹಾಯವಾಣಿ-1098ಕ್ಕೆ ಮಾಹಿತಿ ನೀಡಬೇಕು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry