ಕುಸಿದ ಸೇತುವೆ: ಸಂಪರ್ಕ ಕಡಿತ

ಬುಧವಾರ, ಜೂನ್ 26, 2019
28 °C

ಕುಸಿದ ಸೇತುವೆ: ಸಂಪರ್ಕ ಕಡಿತ

Published:
Updated:

ಸಿರವಾರ: ಸತತವಾಗಿ ಸುರಿಯುತ್ತಿರುವ ಮಳೆಗೆ ಜನ ತತ್ತರಿಸಿದ್ದು, ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳು ಜಲಾವೃತಗೊಂಡು ತೊಂದರೆ ಪಡುತಾಗಿದೆ. ಭಾನುವಾರ ರಾತ್ರಿ ಸುರಿದ ಮಳೆಗೆ ಸಮೀಪದ ಹೀರಾ ಗ್ರಾಮದ ಮನೆಗಳಿಗೆ ಮಳೆ ನೀರು ನುಗ್ಗಿ ರಾತ್ರಿ ವಿದ್ಯುತ್ ಕಡಿತಗೊಂಡಿತ್ತು.

ಮನೆಗಳಲ್ಲಿನ ಧಾನ್ಯಗಳು ನೀರು ಪಾಲಾಗಿ ತೊಂದರೆ ಅನುಭವಿಸುವಂತಾಗಿದೆ. ಗ್ರಾಮದ ಯಲ್ಲಮ್ಮ ಭೋವಿ, ತಾಯಮ್ಮ, ದೇವೆಂದ್ರ, ಶಿವಣ್ಣ, ಮುದ್ದೆಪ್ಪ ನವರ ಮನೆಗಳು ಕುಸಿದಿವೆ.

ಸಿರವಾರ-ಹಟ್ಟಿ ಮುಖ್ಯ ರಸ್ತೆ ಮೇಲ್ಸೇತುವ ಕುಸಿದಿದ್ದು, ಸಂಪೂರ್ಣ ಬಸ್ ಸಂಚಾರ ಸ್ಥಗಿತಗೊಂಡಿದೆ. ಹೀರಾ ಗ್ರಾಮಕ್ಕೆ ಶಾಸಕ ಜಿ. ಹಂಪಯ್ಯನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಕಿರಿಲಿಂಗಪ್ಪ ಭೇಟಿ ನೀಡಿ ಪರಿಶೀಲಿಸಿದರು. ಇಲಾಖೆ ಅಧಿಕಾರಿಗಳನ್ನು ಕರೆಸಿ ಕೂಡಲೇ ರಸ್ತೆ ದುರಸ್ತಿ ಕೈಗೊಳ್ಳುವಂತೆ ಸೂಚಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry