ಕೇರಳದಲ್ಲಿ ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲದು: ಸೀತಾರಾಮ್ ಯೆಚೂರಿ

ಸೋಮವಾರ, ಜೂನ್ 17, 2019
27 °C

ಕೇರಳದಲ್ಲಿ ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲದು: ಸೀತಾರಾಮ್ ಯೆಚೂರಿ

Published:
Updated:
ಕೇರಳದಲ್ಲಿ ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲದು: ಸೀತಾರಾಮ್ ಯೆಚೂರಿ

ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿ ಕೇರಳದಲ್ಲಿ ಹಿಂಸೆಯನ್ನು ಹರಡುತ್ತಿದ್ದು, ಈ ಕೃತ್ಯವನ್ನೇ ಮುಂದುವರಿಸಿದಲ್ಲಿ ಬಿಜೆಪಿಯು ರಾಜ್ಯದಲ್ಲಿ ಒಂದು ಸ್ಥಾನವನ್ನೂ ಗೆಲ್ಲದು ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದರು.

ಕೇರಳದಲ್ಲಿ ಬಿಜೆಪಿಯು ಕಳೆದ ಎರಡು ವಾರಗಳಿಂದ ನಡೆಸಿದ್ದ ‘ಜನ ರಕ್ಷಾ ಯಾತ್ರೆ’ಗೆ ಪ್ರತಿಯಾಗಿ ಇಲ್ಲಿ ಬಿಜೆಪಿ ಪ್ರಧಾನ ಕಚೇರಿ ವರೆಗೆ ಸಿಪಿಐ(ಎಂ) ನಡೆಸಿದ ಯಾತ್ರೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಬಿಜೆಪಿಯು ಕೇರಳದಲ್ಲಿ ಹಿಂಸೆ ಹೆಚ್ಚಿಸಿದರೆ ರಾಜ್ಯದಲ್ಲಿ ಒಬ್ಬನೇ ಒಬ್ಬ ಶಾಸಕನನ್ನು ಹೊಂದುವುದೂ ಅದಕ್ಕೆ ಸಾಧ್ಯವಾಗದು. ಬಿಜೆಪಿಯು ಹಿಂಸೆ ಮತ್ತು ಬೆದರಿಕೆಯ ಮೂಲಕ ರಾಜ್ಯದಲ್ಲಿ ರಾಜಕೀಯ ಅಸ್ತಿತ್ವ ಹೆಚ್ಚಿಸಿಕೊಳ್ಳಲು ಹವಣಿಸುತ್ತಿದೆ’ ಎಂದು ಅವರು ಟೀಕಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry