ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

ಬುಧವಾರ, ಜೂನ್ 26, 2019
24 °C

ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

Published:
Updated:
ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ಕಣಿವೆನಾರಾಯಣಪುರ ಸಮೀಪದಲ್ಲಿರುವ ಚೆನ್ನರಾಯಸ್ವಾಮಿ ಬೆಟ್ಟಕ್ಕೆ ಮಂಗಳವಾರ ಸ್ನೇಹಿತರೊಂದಿಗೆ ಜಲಪಾತ ನೋಡಲು ಬಂದಿದ್ದ ದೊಡ್ಡಬಳ್ಳಾಪುರದ ವಿದ್ಯಾರ್ಥಿ ನವೀನ್ (21) ಕಾಲು ಜಾರಿ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ.

‘ದೊಡ್ಡಬಳ್ಳಾಪುರ ಪಟ್ಟಣದ ನಿವಾಸಿ ಸುಬ್ಬಯ್ಯ ಎಂಬುವರ ಪುತ್ರನಾದ ನವೀನ್‌ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿ.ಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದ. ಮಂಗಳವಾರ ಆತ ಮನೆಯಲ್ಲಿ ಚೆನ್ನರಾಯಸ್ವಾಮಿ ಬೆಟ್ಟದ ಫಾಲ್ಸ್‌ ನೋಡಿ ಬರುವುದಾಗಿ ಹೇಳಿ ಬಂದಿದ್ದ.

(ವಿದ್ಯಾರ್ಥಿ ನವೀನ್‌)

ಬೆಟ್ಟದ ಕಾಲು ಭಾಗ ಏರಿದ್ದ ವಿದ್ಯಾರ್ಥಿಗಳೆಲ್ಲ ಅಲ್ಲಿ ನೀರಾಟದಲ್ಲಿ ಮಗ್ನರಾಗಿದ್ದರು. ಈ ವೇಳೆ ನವೀನ್‌ ಕಾಲು ಜಾರಿ ಬೆಟ್ಟದ ಮೇಲೆ ಇರುವ ನೀರಿನ ಗುಂಡಿಯೊಂದಕ್ಕೆ ಬಿದ್ದು ಅರೆಪ್ರಜ್ಞಾವಸ್ಥೆ ಸ್ಥಿತಿಗೆ ಜಾರಿದ್ದಾನೆ. ಕೂಡಲೇ ಆತನನ್ನು ರಕ್ಷಿಸಿದ ಗೆಳೆಯರು ಆಂಬುಲೆನ್ಸ್‌ನಲ್ಲಿ ದೊಡ್ಡಬಳ್ಳಾಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಆತ ಮೃತಪಟ್ಟಿದ್ದಾನೆ’ ಎಂದು ನಂದಿಗಿರಿಧಾಮ ಠಾಣೆ ಪೊಲೀಸರು ತಿಳಿಸಿದರು.

‘ತಮ್ಮ ಮಗ ನೀರಾಟದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ನವೀನ್‌ ಪೋಷಕರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry