ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ನಾಗೇಂದ್ರ ಪ್ರಭು, ಡಾ. ಉಷಾಗೆ ವಿಶ್ವ ಕೊಂಕಣಿ ಸೇವಾ ಪ್ರಶಸ್ತಿ

Last Updated 17 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ವಿಶ್ವ ಕೊಂಕಣಿ ಕೇಂದ್ರದಿಂದ ನೀಡಲಾಗುವ ‘ಬಸ್ತಿ ವಾಮನ ಶೆಣೈ ಸಮಾಜ ಸೇವಾ ಪ್ರಶಸ್ತಿ -2017’ಗೆ ಕೇರಳದ ಡಾ. ನಾಗೇಂದ್ರ ಜಿ. ಪ್ರಭು ಹಾಗೂ ಗುಜರಾತ್‌ನ ಡಾ. ಉಷಾ ಎಸ್‌. ಹೇರಂಜಾಳ ಅವರನ್ನು ಆಯ್ಕೆ ಮಾಡಲಾಗಿದೆ.

ಆರೋಗ್ಯ ಸೇವಾ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕೇರಳದ ಡಾ. ಜಿ. ನಾಗೇಂದ್ರ ಪ್ರಭು ಅವರನ್ನು ಪುರುಷರ ವಿಭಾಗದಲ್ಲಿ ಹಾಗೂ ವೈದ್ಯಕೀಯ ಸಂಸ್ಥೆಗಳ ನೆರವಿನಿಂದ ಗುಜರಾತಿನ ವಲ್ಸಾಡ್‌ನಲ್ಲಿ ಸೇವಾ ವೃತ್ತಿಯನ್ನು ಸಲ್ಲಿಸಿ, ಅನೇಕ ಹಳ್ಳಿ ಪ್ರದೇಶಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ಉಚಿತವಾಗಿ ನೆರವೇರಿಸಿರುವ ಡಾ. ಉಷಾ ಎಸ್. ಹೇರಂಜಾಳ ಅವರಿಗೆ ಮಹಿಳಾ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗಿದೆ.

ಮಣಿಪಾಲ ಗ್ಲೋಬಲ್ ಎಜುಕೇಶನ್ ಸಂಸ್ಥೆಯ ಟಿ. ವಿ. ಮೋಹನದಾಸ ಪೈ ಈ ಪ್ರಶಸ್ತಿಯ ಪ್ರಾಯೋಜಕರಾಗಿದ್ದು, ಎರಡೂ ಪ್ರಶಸ್ತಿಗಳು ತಲಾ ₹1 ಲಕ್ಷ ನಗದು, ಸನ್ಮಾನಪತ್ರವನ್ನು ಒಳಗೊಂಡಿವೆ. ನವೆಂಬರ್ 20ರಂದು ನಗರದ ಡೊಂಗರಕೇರಿ ಕೆನರಾ ಹೈಸ್ಕೂಲ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT