ಚಿಕಿತ್ಸೆ ಫಲಿಸದೆ ಅಪಘಾತಕ್ಕೀಡಾದ ಮಹಿಳೆ ಸಾವು: ಚಾಲಕ ಬಂಧನ

ಸೋಮವಾರ, ಜೂನ್ 17, 2019
31 °C

ಚಿಕಿತ್ಸೆ ಫಲಿಸದೆ ಅಪಘಾತಕ್ಕೀಡಾದ ಮಹಿಳೆ ಸಾವು: ಚಾಲಕ ಬಂಧನ

Published:
Updated:

ಬೆಂಗಳೂರು: ಟ್ರೀನಿಟಿ ಚರ್ಚ್‌ ಬಳಿಯ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿ ಸೋಮವಾರ ಅಪಘಾತಗೊಂಡು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ರೇಬೆಕ್ ದೇವಾಸ್ (53) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಹಲಸೂರು ಬಳಿಯ ಜೋಗುಪಾಳ್ಯದ ನಿವಾಸಿಯಾಗಿದ್ದ ರೇಬೆಕ್ ಅವರು ಟ್ರೀನಿಟಿ ಚರ್ಚ್‌ನಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದರು.

ಕೆಲಸ ಮುಗಿಸಿ ರಾತ್ರಿ 9.30ರ ಸುಮಾರಿಗೆ ರಸ್ತೆಯ ಮೂಲಕ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಆಗ ಹಿಂದೆಯಿಂದ ವೇಗವಾಗಿ ಬಂದ ಆಟೊ ಅವರಿಗೆ ಗುದ್ದಿದೆ. ಕೆಳಗೆ ಬಿದ್ದಿದ್ದರಿಂದ ಅವರ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿತ್ತು. ಸ್ಥಳದಲ್ಲಿದ್ದವರು ಗಾಯಾಳುವನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು.

ಆಟೊ ಜಪ್ತಿ ಮಾಡಿದ್ದು, ಚಾಲಕ ಆಲ್ತಾಫ್ (24) ಅವರನ್ನು ಬಂಧಿಸಿದ್ದೇವೆ. ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ ಆರೋಪದಡಿ ಪ್ರಕರಣ ದಾಖಲಿದ್ದೇವೆ ಎಂದು ಹಲಸೂರು ಸಂಚಾರ ಪೊಲೀಸರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry