ಕಾರ್ಮಿಕರ ಕಲ್ಯಾಣ ಮಂಡಳಿಯ ಹಣ ಸಮರ್ಪಕ ಬಳಕೆಯಾಗಲಿ:ಕುಮಾರ್‌

ಸೋಮವಾರ, ಜೂನ್ 17, 2019
27 °C

ಕಾರ್ಮಿಕರ ಕಲ್ಯಾಣ ಮಂಡಳಿಯ ಹಣ ಸಮರ್ಪಕ ಬಳಕೆಯಾಗಲಿ:ಕುಮಾರ್‌

Published:
Updated:

ಬೆಂಗಳೂರು: ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಿರುವ ₹ 5,600 ಕೋಟಿ ಹಣವನ್ನು ಕಾರ್ಮಿಕರ ಹಿತಕ್ಕಾಗಿಯೇ ಬಳಕೆಯಾಗಬೇಕು’ ಎಂದು ಮಂಡಳಿಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಒತ್ತಾಯಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಅವರು ಕಾರ್ಮಿಕರ ಕಲ್ಯಾಣಕ್ಕಿರುವ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಲು ಮುಂದಾಗಿದ್ದಾರೆ. ಕಟ್ಟಡ ಕಾರ್ಮಿಕರಿಗೆ ತರಬೇತಿ ನೀಡುವುದು, ಕಾರ್ಮಿಕರಿಗೆ ಎಲ್‌ಪಿಜಿ ಸಿಲೆಂಡರ್ ಪೂರೈಕೆ, ಸ್ಮಾರ್ಟ್‌ ಫೋನ್‌ ವಿತರಣೆ ಇದರಲ್ಲಿ ಸೇರಿವೆ’ ಎಂದರು.

‘ಸ್ಮಾರ್ಟ್‌ ಫೋನ್‌ ಬಳಕೆಯ ತಂತ್ರಜ್ಞಾನ ಕಾರ್ಮಿಕರಿಗೆ ತಿಳಿದಿಲ್ಲ. ಈಗಾಗಲೇ ಬಹುತೇಕ ಕಾರ್ಮಿಕರ ಮನೆಗಳಲ್ಲಿ ಎಲ್‌ಪಿಜಿ ಸೌಲಭ್ಯವಿದೆ. ಹಾಗಾಗಿ ಅನಾವಶ್ಯಕವಾಗಿ ಮಂಡಳಿಯ ಹಣ ಖರ್ಚುಮಾಡುವ ಯೋಜನೆ ಇದಾಗಿದೆ’ ಎಂದರು.

‘ಉದ್ಯೋಗ ಖಾತರಿ ನೌಕರರನ್ನೂ ಈ ಮಂಡಳಿಗೆ ಸೇರಿಸುವ ಕುರಿತು ಚರ್ಚೆ ನಡೆಯುತ್ತಿದೆ. ಅಗತ್ಯವಿದ್ದರೆ ಉದ್ಯೋಗ ಖಾತರಿ ನೌಕರರಿಗೆ ಪ್ರತ್ಯೇಕ ಮಂಡಳಿ ರಚಿಸಲಿ. ಕಟ್ಟಡ ಕಾರ್ಮಿಕರ ಮಂಡಳಿಗೆ ಅವರನ್ನು ಸೇರಿಸುವುದು ಬೇಡ’ ಎಂದು ಅವರು ಒತ್ತಾಯಿಸಿದರು.

‘ಕಾರ್ಮಿಕರು ಮೃತಪಟ್ಟಾಗ ₹ 54 ಸಾವಿರ ಪರಿಹಾರ ನೀಡಲಾಗುತ್ತಿದೆ. ಅದನ್ನು ₹ 5 ಲಕ್ಷಕ್ಕೆ ಹೆಚ್ಚಿಸಬೇಕು. ಕಾರ್ಮಿಕರಿಗೆ ನೀಡುತ್ತಿರುವ ಪರಿಹಾರಗಳು ಮತ್ತು ಸವಲತ್ತುಗಳು ಸಕಾಲಕ್ಕೆ ತಲುಪುವಂತೆ ಯೋಜನೆ ರೂಪಿಸಬೇಕು’ ಎಂದು ಅವರು ಮನವಿ ಮಾಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry