ಆಫ್ರಿಕಾ ಪ್ರಜೆಯಿಂದ ನಿಂದನೆ

ಮಂಗಳವಾರ, ಜೂನ್ 25, 2019
30 °C

ಆಫ್ರಿಕಾ ಪ್ರಜೆಯಿಂದ ನಿಂದನೆ

Published:
Updated:

ಬೆಂಗಳೂರು: ಯಲಹಂಕದ ಕೋಗಿಲು ಕ್ರಾಸ್ ಜಂಕ್ಷನ್‌ನಲ್ಲಿ ಆಫ್ರಿಕಾ ಪ್ರಜೆ ವಾಸ್‌ ಯೂ ಎಂಬಾತ ಸೋಮವಾರ ರಾತ್ರಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿ, ಭಾರತೀಯರನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ.

ಮದ್ಯ ಸೇವಿಸಿದ್ದ ಆತ ಜಂಕ್ಷನ್‌ನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಬಸ್‌ಗಾಗಿ ಕಾಯುತ್ತಿದ್ದ ಯುವತಿಯರು ಹಾಗೂ ಸಾರ್ವಜನಿಕರಿಗೆ ಇದರಿಂದ ಕಸಿವಿಸಿ ಉಂಟಾಯಿತು. ಆತನ ವರ್ತನೆಯನ್ನು ಪ್ರಶ್ನಿಸಿದ್ದಕ್ಕೆ ಏರುಧ್ವನಿಯಲ್ಲಿ ಮಾತನಾಡಿ, ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಹೆಚ್ಚಿನ ಜನರು ಸೇರುತ್ತಿದ್ದಂತೆ ಆತ ಅಲ್ಲಿಂದ ಪರಾರಿಯಾದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿ ಕೆಂಪೇಗೌಡ ವಿಮಾನ ನಿಲ್ದಾಣದ ಕಾರ್ಗೊ ಕೊರಿಯರ್‌ ಘಟಕದಲ್ಲಿ ಕೆಲಸ ಮಾಡುತ್ತಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಯಲಹಂಕ ಪೊಲೀಸರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry