ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವಿಟರ್‌ನಲ್ಲಿ ಹೆಚ್ಚು ರಿ–ಟ್ವೀಟ್‌ ಪಡೆದು ಮೋದಿ, ಕೇಜ್ರಿವಾಲ್‌ ಹಿಂದಿಕ್ಕಿದ ರಾಹುಲ್‌ ಗಾಂಧಿ

Last Updated 19 ಅಕ್ಟೋಬರ್ 2017, 6:26 IST
ಅಕ್ಷರ ಗಾತ್ರ

ನವದೆಹಲಿ: ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಸಾರ್ವಜನಿಕರಿಂದ‌ ಹೆಚ್ಚು ರಿ–ಟ್ವೀಟ್‌ ಪಡೆಯುವ ಮೂಲಕ ಕಾಂಗ್ರೆಸ್‌ನ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಆರವಿಂದ ಕೇಜ್ರಿವಾಲ್‌ ಅವರನ್ನು ಹಿಂದಿಕ್ಕಿದ್ದಾರೆ.

ಕಳೆದ ಒಂದು ವಾರದ ಅವಧಿಯಲ್ಲಿ ನರೇಂದ್ರ ಮೋದಿ ಹಾಗೂ ಕೇಜ್ರಿವಾಲ್‌ ಅವರ ಟ್ವೀಟ್‌ಗಿಂತಲ್ಲೂ ಹೆಚ್ಚು ಜನ ರಾಹುಲ್‌ ಗಾಂಧಿ ಮಾಡಿದ ಟ್ವೀಟ್‌ಗೆ ರಿ–ಟ್ವೀಟ್‌ ಮಾಡಿರುವುದು ‘ಹಿಂದೂಸ್ಥಾನ್‌ ಟೈಮ್ಸ್‌’ ನಡೆಸಿದ ಸಮೀಕ್ಷೆಯಲ್ಲಿ ಮಾಹಿತಿ ಬೆಳಕಿಗೆ ಬಂದಿದೆ.

47 ವರ್ಷ ವಯಸ್ಸಿನ ರಾಹುಲ್‌ ಗಾಂಧಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವುದು ತಿಳಿದು ಬಂದಿದೆ.

ರಾಹುಲ್‌ ಗಾಂಧಿ ಜುಲೈ –ಸೆಪ್ಟೆಂಬರ್ ತಿಂಗಳಲ್ಲಿ ಟ್ವಿಟರ್‌ನಲ್ಲಿ 10 ಲಕ್ಷ ಹೊಸ ಹಿಂಬಾಲಕರನ್ನು ಹೊಂದಿರುವುದಾಗಿ ವರದಿಯಲ್ಲಿ ವಿವರಿಸಲಾಗಿದೆ. ಜತೆಗೆ, ಟ್ವಿಟರ್‌ನಲ್ಲಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಭಾರತದ ಎರಡನೆ ರಾಜಕಾರಣಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಸ್ಯಾಂಡಲ್‌ವುಡ್ ನಟಿ ರಮ್ಯಾ ಕಾಂಗ್ರೆಸ್‌ನ ಜಾಲತಾಣದ ಜವಾಬ್ದಾರಿ ವಹಿಸಿಕೊಂಡ ನಂತರ ಪಕ್ಷದ ಜನಪ್ರಿಯತೆ ಹೆಚ್ಚುತ್ತಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸುತ್ತಿದ್ದು, ಪಕ್ಷದ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುತ್ತಿದೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT