ಯೋಧರೊಂದಿಗೆ ಮೋದಿ ದೀಪಾವಳಿ ಸಂಭ್ರಮಾಚರಣೆ

ಮಂಗಳವಾರ, ಜೂನ್ 18, 2019
23 °C

ಯೋಧರೊಂದಿಗೆ ಮೋದಿ ದೀಪಾವಳಿ ಸಂಭ್ರಮಾಚರಣೆ

Published:
Updated:
ಯೋಧರೊಂದಿಗೆ ಮೋದಿ ದೀಪಾವಳಿ ಸಂಭ್ರಮಾಚರಣೆ

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ಗಡಿಯಲ್ಲಿ ಗುರುವಾರ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು.

ಗುರೇಜ್‌ ಸೆಕ್ಟರ್‌ಗೆ ಭೇಟಿ ನೀಡಿದ ಮೋದಿ, ಇಲ್ಲಿನ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಪ್ರದೇಶದಲ್ಲಿ ಯೋಧರಿಗೆ ದೀಪಾವಳಿ ಹಬ್ಬದ ಶುಭ ಕೋರಿ ಸಿಹಿ ಹಂಚಿದರು.

2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಧಾನಿ ಮೋದಿ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ತಿಳಿಸಿದ್ದರು. ಇದೀಗ ಮೋದಿ ಅವರು ಎರಡನೇ ಬಾರಿಗೆ ಇಲ್ಲಿಗೆ ಬಂದಿದ್ದು, ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಅಟ್ಟಾರಿ - ವಾಘಾ ಗಡಿಯಲ್ಲಿ ಸಿಹಿ ವಿನಿಮಯ
ಇದೇ ವೇಳೆ ದೀಪಾವಳಿ ಹಬ್ಬದ ಪ್ರಯುಕ್ತ ಭಾರತ ಮತ್ತು ಪಾಕಿಸ್ತಾನದ ಅಟ್ಟಾರಿ - ವಾಘಾ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳುವ ಮೂಲಕ ಶುಭ ಕೋರಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry