ಸೋಮವಾರ, ಸೆಪ್ಟೆಂಬರ್ 16, 2019
21 °C

ಜ್ವರ: ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ದಾಖಲು

Published:
Updated:
ಜ್ವರ: ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಜ್ವರ, ರಕ್ತದೊತ್ತಡದಿಂದ ಬಳಲುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೋ ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಾಗಿದ್ದಾರೆ.

ಅಪೋಲೋ ಆಸ್ಪತ್ರೆಯ ವೈದ್ಯ ಡಾ.ಪ್ರಮೋದ್ ಅವರಿಂದ ಬಿಎಸ್‌ವೈಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜ್ವರ ಹೆಚ್ಚಾಗಿದ್ದು, ರಕ್ತದೊತ್ತಡದಲ್ಲೂ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಈವರೆಗಿನ ಚಿಕಿತ್ಸೆಯಿಂದ ಯಡಿಯೂರಪ್ಪ ಅವರ ಆರೋಗ್ಯ ಸುಧಾರಿಸಿದೆ ಎಂದು ಮೂಲಗಳು ತಿಳಿಸಿವೆ.

ಡಾ.ಪ್ರಮೋದ್ ಅವರು ಚಿಕಿತ್ಸೆ ಮುಂದುವರಿಸಿದ್ದು, ಜ್ವರ ಕಡಿಮೆಯಾದ ಬಳಿಕ ಇಂದು ಸಂಜೆಯ ವೇಳೆಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳುವ ಸಾಧ್ಯತೆ ಇದೆ.

Post Comments (+)