ಆಂಧ್ರಪ್ರದೇಶ: ರದ್ದಾದ ₹1.5 ಕೋಟಿ ಮೊತ್ತದ ನೋಟು ವಶ, ಒಬ್ಬನ ಬಂಧನ

ಬುಧವಾರ, ಜೂನ್ 19, 2019
23 °C

ಆಂಧ್ರಪ್ರದೇಶ: ರದ್ದಾದ ₹1.5 ಕೋಟಿ ಮೊತ್ತದ ನೋಟು ವಶ, ಒಬ್ಬನ ಬಂಧನ

Published:
Updated:
ಆಂಧ್ರಪ್ರದೇಶ: ರದ್ದಾದ ₹1.5 ಕೋಟಿ ಮೊತ್ತದ ನೋಟು ವಶ, ಒಬ್ಬನ ಬಂಧನ

ಕಾಕಿನಾಡ: ಆಂಧ್ರ ಪ್ರದೇಶದ ಕಾಕಿನಾಡದಲ್ಲಿ ರದ್ದಾದ ಕೋಟ್ಯಂತ ಮೊತ್ತದ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರದ್ದಾದ ₹ 500 ಹಾಗೂ ₹ 1,000 ಮುಖಬೆಲೆಯ ಒಟ್ಟು ₹ 1.5 ಕೋಟಿ ಮೊತ್ತದ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟಾಚಾರ ಮತ್ತು ಕಪ್ಪು ಹಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2016ರ ನ.8ರಂದು ₹ 500 ಹಾಗೂ ₹ 1,000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿದೆ. ಈ ನೋಟುಗಳಿಗೆ ಪರ್ಯಾಯವಾಗಿ ₹ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿದೆ.

ರದ್ದಾದ ನೋಟುಗಳನ್ನು ಇಟ್ಟುಕೊಳ್ಳುವುದು ಅಪರಾಧ. ಇದು ಗೊತ್ತಿದ್ದರೂ ಹಲವರು ರದ್ದಾದ ನೋಟುಗಳನ್ನು ಇರಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry