ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ ನಡೆಸಿದರೆ ರಾಮನಿಂದ ಶಿಕ್ಷೆ ಖಂಡಿತ: ಲಾಲು ಪ್ರಸಾದ್

ಬುಧವಾರ, ಜೂನ್ 19, 2019
30 °C

ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ ನಡೆಸಿದರೆ ರಾಮನಿಂದ ಶಿಕ್ಷೆ ಖಂಡಿತ: ಲಾಲು ಪ್ರಸಾದ್

Published:
Updated:
ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ ನಡೆಸಿದರೆ ರಾಮನಿಂದ ಶಿಕ್ಷೆ ಖಂಡಿತ: ಲಾಲು ಪ್ರಸಾದ್

ಪಟ್ನಾ: ‘ಬಿಜೆಪಿ ಪಕ್ಷ ರಾಮನ ಹೆಸರನ್ನು ರಾಜಕೀಯ ದಾಳವಾಗಿ ಬಳಸಿಕೊಂಡರೆ ರಾಮ ನೀಡುವ ಶಿಕ್ಷಗೆ ಗುರಿಯಾಗಬೇಕಾಗುತ್ತದೆ’ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹೇಳಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿದ ಲಾಲೂ ಪ್ರಸಾದ್, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಆದಿತ್ಯನಾಥ್ ಅಯೋಧ್ಯೆಯಲ್ಲಿ ನಡೆಸಿದ ದೀಪಾವಳಿ ಕಾರ್ಯಕ್ರಮವನ್ನು ಲಾಲೂ ಖಂಡಿಸಿದ್ದಾರೆ.

‘ಬಿಜೆಪಿಯವರು ರಾಮನ ಹೆಸರಿನಲ್ಲಿ ರಾಜಕೀಯ ನಾಟಕವಾಡುತ್ತಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಧರ್ಮ ಹಾಗೂ ಪ್ರಾರ್ಥನೆ ವಿಚಾರದಲ್ಲಿ ವೈಯಕ್ತಿಕ ಸ್ವಾತಂತ್ರ್ಯವಿದೆ. ಆದರೆ ಬಿಜೆಪಿಯವರು ಅದರಲ್ಲೂ ಮುಖ್ಯವಾಗಿ ಆದಿತ್ಯನಾಥ್ ಅವರು ರಾಜಕೀಯ ಆಟವಾಡುತ್ತಿದ್ದಾರೆ. ರಾಮನ ಹೆಸರಿನಲ್ಲಿ ರಾಜಕೀಯ ಆಟವಾಡುತ್ತಿರುವ ಆದಿತ್ಯನಾಥ್ ಅವರ ನಡವಳಿಕೆಯನ್ನು ಜನರು ಅರಿತುಕೊಳ್ಳಬೇಕು. ರಾಜಕೀಯದಲ್ಲಿ ಬೆಳೆಯುವ ಸಲುವಾಗಿ ರಾಮನ ಹೆಸರನ್ನು ಬಳಸಿಕೊಂಡಿದ್ದಲ್ಲಿ ರಾಮನ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ’ ಎಂದಿದ್ದಾರೆ.

‘ಕೇಂದ್ರ ಸರ್ಕಾರ ನೋಟು ರದ್ಧತಿ ಜಾರಿಗೆ ತಂದಿದ್ದರಿಂದ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನ ಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯ ಹೃದಯದಲ್ಲೂ ರಾಮ ನೆಲೆಸಿದ್ದಾನೆ. ಹೀಗಾಗಿ ಜನರನ್ನು ನೋಯಿಸುವುದರಿಂದ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪಕ್ಷವನ್ನು ರಾಮ ನಾಶಪಡಿಸುತ್ತಾನೆ’ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry