ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈ ಉತ್ಪನ್ನಗಳ ಮೇಲೆ ಜಿಎಸ್‌ಟಿ ಬೇಡ: ಜೇಟ್ಲಿಗೆ ಸಿಎಂ ಪತ್ರ

Last Updated 19 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೈ ಉತ್ಪನ್ನಗಳ ಮೇಲೆ ವಿಧಿಸಿರುವ ಸರಕು ಸೇವಾ ತೆರಿಗೆಯನ್ನು(ಜಿಎಸ್‌ಟಿ) ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಗುರುವಾರ ಪತ್ರ ಬರೆದಿರುವ ಸಿದ್ದರಾಮಯ್ಯ, ಮುಂದಿನ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ವಿಷಯವನ್ನು ಆದ್ಯತೆಯ ಮೇಲೆ ಪರಿಗಣಿಸಬೇಕು. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಕೈ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗಿರುವ ಅಪಾರ ಸಂಖ್ಯೆಯ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

‘ಕೆಲವು ಬಗೆಯ ಕೈ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸಿರುವುದನ್ನು ವಿರೋಧಿಸಿ ರಂಗಕರ್ಮಿ ಪ್ರಸನ್ನ ಕೆಲವು ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.  ಗ್ರಾಮ ಸೇವಾ ಸಂಘವನ್ನು ಪ್ರತಿನಿಧಿಸುತ್ತಿರುವ ಪ್ರೊ.ಆಶಿಶ್‌ ನಂದಿ, ಶ್ಯಾಮ್ ಬೆನಗಲ್‌ ಅವರು ನನ್ನನ್ನು ಭೇಟಿ ಮಾಡಿ ಮನವಿ ಅರ್ಪಿಸಿದ್ದಾರೆ. ಬೆಣ್ಣೆ ತಯಾರಿಕೆಯಿಂದ ಹಿಡಿದು ಕೈಯಿಂದ ಮಾಡಿದ ಕಾಗದದವರೆಗಿನ ಹಲವು ಉತ್ಪನ್ನಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡುವ ಅಗತ್ಯವಿದೆ’ ಎಂದೂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT