ಶ್ರೀನಿವಾಸ ಜಿ.ಕಪ್ಪಣ್ಣಗೆ ಶ್ರೀ ಶಿವಕುಮಾರ ಪ್ರಶಸ್ತಿ

ಮಂಗಳವಾರ, ಜೂನ್ 18, 2019
23 °C

ಶ್ರೀನಿವಾಸ ಜಿ.ಕಪ್ಪಣ್ಣಗೆ ಶ್ರೀ ಶಿವಕುಮಾರ ಪ್ರಶಸ್ತಿ

Published:
Updated:
ಶ್ರೀನಿವಾಸ ಜಿ.ಕಪ್ಪಣ್ಣಗೆ ಶ್ರೀ ಶಿವಕುಮಾರ ಪ್ರಶಸ್ತಿ

ಹೊಸದುರ್ಗ (ಚಿತ್ರದುರ್ಗ ಜಿಲ್ಲೆ): ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶಿವಕುಮಾರ ಕಲಾ ಸಂಘದಿಂದ ನೀಡುವ ವಾರ್ಷಿಕ ‘ಶ್ರೀ ಶಿವಕುಮಾರ ಪ್ರಶಸ್ತಿ'ಗೆ ಈ ಬಾರಿ ರಂಗ ಸಂಘಟಕ ಶ್ರೀನಿವಾಸ ಜಿ.ಕಪ್ಪಣ್ಣ  ‌ಆಯ್ಕೆಯಾಗಿದ್ದಾರೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಶ್ರೀನಿವಾಸ ಜಿ.ಕಪ್ಪಣ್ಣ ಅವರ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಣೇಹಳ್ಳಿಯಲ್ಲಿ ನವೆಂಬರ್ 9ರಂದು ನಡೆಯಲಿರುವ 2017ರ ರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿಯು ₹ 50,000 ನಗದು, ಅಭಿನಂದನಾ ಪತ್ರ, ಫಲಕ ಒಳಗೊಂಡಿದೆ. ಕಲಾ ಸಂಘವು 13 ವರ್ಷಗಳಿಂದ ರಂಗಭೂಮಿಯಲ್ಲಿ ದುಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry