ಯಡಿಯೂರಪ್ಪ ಗುಣಮುಖ

ಗುರುವಾರ , ಜೂನ್ 20, 2019
30 °C

ಯಡಿಯೂರಪ್ಪ ಗುಣಮುಖ

Published:
Updated:
ಯಡಿಯೂರಪ್ಪ ಗುಣಮುಖ

ಬೆಂಗಳೂರು: ಜ್ವರ ಮತ್ತು ರಕ್ತದೊತ್ತಡ ಏರುಪೇರಿನಿಂದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ  ದಾಖಲಾಗಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ.

ಬುಧವಾರ ರಾತ್ರಿ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ. ಪ್ರಮೋದ್ ನೇತೃತ್ವದ ತಂಡ ಚಿಕಿತ್ಸೆ ನೀಡಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಎರಡು ದಿನ ಸಂಪೂರ್ಣ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸೂಚಿಸಿದ್ದಾರೆ.

‘ಯಡಿಯೂರಪ್ಪ ಆಗಾಗ್ಗೆ ವೈದ್ಯರ ಭೇಟಿಗೆ ತೆರಳುತ್ತಾರೆ. ನ. 2ರಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಕೈಗೊಳ್ಳಲಿದ್ದಾರೆ. ಇಡೀ ರಾಜ್ಯ ಸುತ್ತಬೇಕಿರುವುದರಿಂದ ಸಂಪೂರ್ಣವಾಗಿ ದೈಹಿಕ ತಪಾಸಣೆ ಮಾಡಿಸಿಕೊಂಡಿದ್ದಾರೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ಅವರ ಆಪ್ತರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry