ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಿಲಾಲ್‌ಜಿ ಎಚ್‌. ಬಾಫ್ನಾ ನಿಧನ

Last Updated 19 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಗೋಕಾಕ (ಬೆಳಗಾವಿ ಜಿಲ್ಲೆ): ಇಲ್ಲಿನ ಬಸವನಗರ ನಿವಾಸಿ, ಸ್ವಾತಂತ್ರ್ಯ ಹೋರಾಟಗಾರ ಚುನಿಲಾಲ್‌ಜಿ ಎಚ್‌. ಬಾಫ್ನಾ (96) ಗುರುವಾರ ನಿಧನರಾದರು.

ಅವರಿಗೆ ಒಬ್ಬ ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.

ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ಅವರು ಭಾಗವಹಿಸಿದ್ದರು. ಬ್ರಿಟಿಷ್‌ ಸರ್ಕಾರದಿಂದ ಒಂದು ವರ್ಷ ಕಾರಾಗೃಹ ಶಿಕ್ಷೆಗೆ ಒಳಗಾಗಿದ್ದರು. ಬೆಳಗಾವಿಯ ಹಿಂಡಲಗಾ ಹಾಗೂ ಪುಣೆಯ ಯರವಾಡ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದರು. ಶುಕ್ರವಾರ (ಅ.20) ಮಧ್ಯಾಹ್ನ 12ಕ್ಕೆ ಇಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

(ಕುಟುಂಬದವರ ದೂರವಾಣಿ ಸಂಖ್ಯೆ 94490 89222).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT