ಆರ್‌.ಕೆ. ನಗರ ಕ್ಷೇತ್ರದಿಂದ ಸ್ಪರ್ಧೆ: ದೀಪಾ

ಬುಧವಾರ, ಜೂನ್ 19, 2019
29 °C

ಆರ್‌.ಕೆ. ನಗರ ಕ್ಷೇತ್ರದಿಂದ ಸ್ಪರ್ಧೆ: ದೀಪಾ

Published:
Updated:
ಆರ್‌.ಕೆ. ನಗರ ಕ್ಷೇತ್ರದಿಂದ ಸ್ಪರ್ಧೆ: ದೀಪಾ

ಚೆನ್ನೈ: ಆರ್‌.ಕೆ. ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸೋದರ ಸೊಸೆ ಜೆ. ದೀಪಾ ಅವರು ಗುರುವಾರ ಹೇಳಿದ್ದಾರೆ.

ಡಿಸೆಂಬರ್‌ 31ರ ಮೊದಲು ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗವು ಈಚೆಗೆ ಘೋಷಿಸಿತ್ತು.

‘ನಾನು ಖಂಡಿತಾ ಸ್ಪರ್ಧಿಸುತ್ತೇನೆ ಮತ್ತು ಜನರ ಬೆಂಬಲದಿಂದ ಗೆಲ್ಲುತ್ತೇನೆ’ ಎಂದು ದೀಪಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಎಂಜಿಆರ್ ಅಮ್ಮಾ ದೀಪಾ ಪೆರವೈ ಪಕ್ಷದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾದರೆ ಜಯಲಲಿತಾ ಅವರು ಆರಂಭಿಸಿದ್ದ ಕಲ್ಯಾಣ ಯೋಜನೆಗಳನ್ನು ಮುಂದುವರಿಸುತ್ತೇನೆ’ ಎಂದಿದ್ದಾರೆ.

ಮುಖ್ಯಮಂತ್ರಿ ಎಡಪಳ್ಳಿ ಪಳನಿಸ್ವಾಮಿ ಬಣಕ್ಕೆ ಸೇರ್ಪಡೆಗೊಳ್ಳುವ ವಿಚಾರವನ್ನು ತಳ್ಳಿಹಾಕಿರುವ ದೀಪಾ ಅವರು, ‘ಪಕ್ಷವನ್ನು ಬಲಿಷ್ಠಗೊಳಿಸಲು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

ಎಐಎಡಿಎಂಕೆಯ ಎರಡೆಲೆ ಚಿಹ್ನೆ ತಮ್ಮ ಪಕ್ಷಕ್ಕೆ ಲಭಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry