ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌರ ಫಲಕ ಹಗರಣ: ವಿಶೇಷ ಅಧಿವೇಶನಕ್ಕೆ ತೀರ್ಮಾನ

Last Updated 19 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ತಿರುವನಂತಪುರ: ಸೌರ ಫಲಕ ಹಗರಣದ ಕುರಿತು ನ್ಯಾಯಾಂಗ ಆಯೋಗ ನೀಡಿರುವ ವರದಿಯ ಬಗ್ಗೆ ಚರ್ಚಿಸಲು ನವೆಂಬರ್‌ 9ರಂದು ವಿಶೇಷ ಅಧಿವೇಶನ ನಡೆಸಲು ಕೇರಳ ಸರ್ಕಾರ ತೀರ್ಮಾನಿಸಿದೆ.

ಹಗರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರ ವಿರುದ್ಧ ಜಾಗೃತ ದಳ ತನಿಖೆ ನಡೆಸುವಂತೆ ನ್ಯಾಯಾಂಗ ಆಯೋಗವು ಆದೇಶ ನೀಡಿದ ಬಳಿಕ ಸರ್ಕಾರವು ಈ ತೀರ್ಮಾನ ತೆಗೆದುಕೊಂಡಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ನಡೆಸುವ ಕುರಿತು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಯಿತು.

ನ್ಯಾಯಾಂಗ ಆಯೋಗವು ವರದಿ ನೀಡಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಕೇರಳ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅರಿಜಿತ್‌ ಪಸಾಯತ್‌ ಅವರಿಂದ ಕಾನೂನು ಸಲಹೆ ಪಡೆದುಕೊಳ್ಳಲು ಸರ್ಕಾರ ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT