ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ: 42 ಸೀಟು ಖಾಲಿ

Last Updated 19 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹೆಸರಘಟ್ಟದಲ್ಲಿರುವ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ ಕೋರ್ಸ್‌ಗಳ ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿರುವುದರಿಂದ ಈ ಬಾರಿ 42 ಸೀಟುಗಳು ಖಾಲಿ ಉಳಿದಿವೆ.

ಈ ಸಂಸ್ಥೆಯು ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುತ್ತದೆ. ಒಟ್ಟು ಇಲ್ಲಿ 66 ಸೀಟುಗಳಿದ್ದು, ಈ ಪೈಕಿ 24 ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪಡೆದಿದ್ದಾರೆ. ಆದರೆ, ಆ.15ಕ್ಕೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಹೊರರಾಜ್ಯದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡದಿರುವುದರಿಂದ ಹೆಚ್ಚಿನ ಸೀಟುಗಳು ಖಾಲಿ ಉಳಿದಿವೆ ಎಂದು ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಿದ ಬಳಿಕ ಉಳಿಯುವ ಸೀಟುಗಳನ್ನು ಮಾತ್ರ ಹೊರರಾಜ್ಯದ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆಗೆ ಉನ್ನತ ಶಿಕ್ಷಣ ಇಲಾಖೆ ಬರೆದಿರುವ ಪತ್ರದಲ್ಲಿ ತಿಳಿಸಿದೆ.

‘ಕರ್ನಾಟಕ ಸರ್ಕಾರ ನಡೆಸುತ್ತಿರುವ ಏಕೈಕ ಸಿನಿಮಾ ಸಂಸ್ಥೆ ಇದೆ. ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟು ಮೀಸಲಿಟ್ಟಿರುವುದು ಸರಿ. ಆದರೆ, ಸದ್ಯ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದೆ’ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು. ತಳವಾರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT