ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಅರಣ್ಯ ಸಮಿತಿ ರಚಿಸಲು ಸಲಹೆ

Last Updated 20 ಅಕ್ಟೋಬರ್ 2017, 5:20 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಗ್ರಾಮ ಅರಣ್ಯ ಸಮಿತಿ ರಚಿಸಿಕೊಳ್ಳುವ ಮೂಲಕ ಬೆಟ್ಟಕ್ಕೆ ಅನುಮತಿ ಇಲ್ಲದೆ ಯಾರೂ ಪ್ರವೇಶ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಅರಣ್ಯ ಅಧಿಕಾರಿ ನಾಗೇಶ್‌ ಹೇಳಿದರು.

ಅವರು ಇತ್ತೀಚೆಗೆ ತಾಲ್ಲೂಕಿನ ಚನ್ನರಾಯಸ್ವಾಮಿ ಬೆಟ್ಟದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಬೆಟ್ಟಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಂದಿ ಬೆಟ್ಟದ ತಪ್ಪಲಿನ ಗಿರಿ ಶ್ರೇಣಿಗಳಲ್ಲೇ ಕಿರು ಜಲಪಾತಗಳನ್ನು ಹೊಂದಿರುವ ಬೆಟ್ಟ ಚನ್ನರಾಯಸ್ವಾಮಿ ಬೆಟ್ಟವಾಗಿದೆ. ಇಲ್ಲಿಗೆ ಬರುವ ಪ್ರವಾಸಿಗರು ಪ್ಲಾಸ್ಟಿಕ್‌ ವಸ್ತುಗಳು, ಮದ್ಯದ ಬಾಟಲಿಗಳನ್ನು ತಂದು ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ವತಿಯಿಂದ ಸೂಚನಾ ಫಲಕ ಹಾಕಲಾಗಿದೆ. ಆದರೆ ಜನರು ಮಾತ್ರ ಜಾಗೃತರಾಗುತ್ತಿಲ್ಲ ಎಂದರು.

ಬೆಟ್ಟದಲ್ಲಿ ಬೃಹತ್‌ ಕಲ್ಲು ಬಂಡೆಗಳೇ ಹೆಚ್ಚಾಗಿರುವುದರಿಂದ ಮಳೆಗಾಲದಲ್ಲಿ ನೀರು ಹರಿದು ಪಾಚಿ ಕಟ್ಟಿರುತ್ತವೆ. ಇಂತಹ ಅಪಾಯದ ಸ್ಥಳಗಳಲ್ಲಿ ಹೊಸಬರು ನಡೆದಾಡಲು ಆಗುವುದಿಲ್ಲ. ಕೆಲವರು ಸಾಹಸ ಮಾಡಲು ಹೋಗುವುದು, ಸೆಲ್ಫಿ ಫೋಟೊಗಳನ್ನು ತೆಗೆಯಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದರು. ಯುವ ಸಂಚಾಲಕ ಚಿದಾನಂದ್‌, ಚನ್ನೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT