ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಾತನ ಕಾಲದ ಕಲ್ಯಾಣಿ ಸ್ವಚ್ಛತೆ

Last Updated 20 ಅಕ್ಟೋಬರ್ 2017, 5:39 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಹಂಪಸಾಗರ ಗ್ರಾಮದಲ್ಲಿ ಪುರಾತನ ಕಾಲದ ಕಲ್ಯಾಣಿಯನ್ನು ಬುಧವಾರ ಮಠಾಧೀಶರ ಧರ್ಮ ಪರಿಷತ್ ಮತ್ತು ಯುವ ಬ್ರಿಗೇಡ್‌ ನೇತೃತ್ವದಲ್ಲಿ ಸ್ವಚ್ಛಗೊಳಿಸಲಾಯಿತು.

ಬ್ರಿಗೇಡ್ ನ ತಾಲ್ಲೂಕು ಘಟಕದ ಸಂಚಾಲಕ ಜಿ.ಎಂ.ಜಗದೀಶ್‌ ಮಾತನಾಡಿ, ‘ತಾಲ್ಲೂಕಿನಲ್ಲಿ ಪಾಳು ಬಿದ್ದಿರುವ ಕಲ್ಯಾಣಿಗಳನ್ನು ಸ್ವಚ್ಛಗೊಳಿಸಿ ಜೀರ್ಣೋದ್ಧಾರ ಮಾಡಲಾಗುವುದು. ಮಳೆ ನೀರು ಸಂಗ್ರಹಗೊಂಡಲ್ಲಿ ಕೊಳವೆಬಾವಿಗಳ ಅಂತರ್ಜಲ ಹೆಚ್ಚಳ ಆಗುತ್ತದೆ’ ಎಂದರು.

ಹಂಪಸಾಗರದ ಅಭಿನವ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ನಂದಿಪುರದ ಮಹೇಶ್ವರ ಸ್ವಾಮೀಜಿ, ಹನಸಿಯ ಶಂಕರ ಸ್ವಾಮೀಜಿ, ಚಾನುಕೋಟಿ ಮಠದ ಸಿದ್ಧಲಿಂಗ ಶಿವಾಚಾರ್ಯ, ಮರಿಯಮ್ಮನಹಳ್ಳಿಯ ಮಲ್ಲಿಕಾರ್ಜುನ ಶಿವಾಚಾರ್ಯ, ಬೆಣ್ಣಿಹಳ್ಳಿ ಮಠದ ಪಂಚಾಕ್ಷರಿ ಸ್ವಾಮೀಜಿ, ಬ್ರಿಗೇಡ್‌ನ ಪ್ರವೀಣ್ ಕಡ್ಲಿ, ಶಿವಪುತ್ರ, ಪ್ರವೀಣ, ಎಚ್‌.ಎಂ. ಚನ್ನವೀರ್‌, ಸಿದ್ದೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT