ಸುವರ್ಣಾವತಿ ಜಲಾಶಯಕ್ಕೆ ಬಾಗಿನ

ಗುರುವಾರ , ಜೂನ್ 20, 2019
27 °C

ಸುವರ್ಣಾವತಿ ಜಲಾಶಯಕ್ಕೆ ಬಾಗಿನ

Published:
Updated:
ಸುವರ್ಣಾವತಿ ಜಲಾಶಯಕ್ಕೆ ಬಾಗಿನ

ಚಾಮರಾಜನಗರ: ಭರ್ತಿಯಾಗಿರುವ ಸುವರ್ಣಾವತಿ ಜಲಾಶಯಕ್ಕೆ ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ಜಿಲ್ಲಾ ಘಟಕ ಹಾಗೂ ಯುವ ಘಟಕದಿಂದ ಬಾಗಿನ ಅರ್ಪಿಸಲಾಯಿತು.

ಬಳಿಕ ವೇದಿಕೆಯ ಜಿಲ್ಲಾ ಉಸ್ತುವಾರಿ ಪ್ರವೀಣ್‌ಕುಮಾರ್ ಮಾತನಾಡಿ, ತಾಲ್ಲೂಕಿನ ಜೀವನಾಡಿಯಾದ ಸುವರ್ಣಾವತಿ, ಚಿಕ್ಕಹೊಳೆ ಜಲಾಶಯಗಳು ಭರ್ತಿಗೊಂಡು ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ ಎಂದು ಹೇಳಿದರು.

ಜಿಲ್ಲೆಯ ಜನರಿಗೆ ನೀರಾವರಿ ಭೂಮಿ ಕೊಡಿಸಲು ಕರವೇ ಸಿದ್ಧತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು ಎಂದರು. ವೇದಿಕೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಆರ್.ಕೆ. ನವೀನ್‌ಕುಮಾರ್ ಮಾತನಾಡಿದರು.

ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜೇಂದ್ರ ವಿ. ನಾಯಕ್, ಸಂಘಟನಾ ಕಾರ್ಯದರ್ಶಿ ಜಗದೀಶ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಚಂದ್ರ, ಕಾರ್ಯದರ್ಶಿ ಲೋಕೇಶ್, ಗುಂಡ್ಲುಪೇಟೆ ಟೌನ್ ಅಧ್ಯಕ್ಷ ರಮೇಶ್‌ನಾಯಕ್, ಟೌನ್ ಅಧ್ಯಕ್ಷ ಸುರೇಶ್‌ನಾಯಕ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry