ಸೋಮವಾರ, ಸೆಪ್ಟೆಂಬರ್ 16, 2019
22 °C

ಕ್ಷಮೆಯಾಚನೆಗೆ ಒತ್ತಾಯಿಸಿ ಪ್ರತಿಭಟನೆ

Published:
Updated:

ಚಿಕ್ಕಮಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ ಕುಮಾರ್ ಅವರು ಕ್ಷೌರಿಕರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಸವಿತಾ ಸಮಾಜದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್‌ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸಚಿವ ರಮೇಶ್ ಕುಮಾರ್ ವಿರುದ್ಧ ಘೋಷಣೆ ಕೂಗಿದರು. ‘ ಧನದಾಹಿ ವೈದ್ಯರು ಕ್ಷೌರಿಕರು ಜೇಬುಗಳ್ಳರಿಗಂತಲೂ ಕಡೆ’ ಎಂದು ಸಚಿವರು ಹೇಳಿ, ಕ್ಷೌರಿಕರಿಗೆ ಅಪಮಾನ ಮಾಡಿದ್ದಾರೆ.

ಕ್ಷೌರ ವೃತ್ತಿ ನಡೆಸಿ ಸ್ವಾಭಿಮಾನದಿಂದ ಜೀವನ ಸಾಗಿಸುತ್ತಿರವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಚಿವರು ಉದ್ಧಟತನ ಮೆರೆದಿದ್ದಾರೆ. ಅವರು ಬಹಿರಂಗವಾಗಿ ಕ್ಷೌರಿಕರ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತ್ಯನಾರಾಯಣ್, ವಿಶ್ವನಾಥ್, ಹರೀಶ್, ಮಂಜುನಾಥ್, ಚೇತನ್ ಇದ್ದರು.

Post Comments (+)