ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ: ಭರವಸೆ

ಮಂಗಳವಾರ, ಜೂನ್ 18, 2019
23 °C

ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ: ಭರವಸೆ

Published:
Updated:

ಹೊನ್ನಾವರ: ತಾಲ್ಲೂಕಿನ ಕೆಳಗಿನೂರು ಹೊಳ್ಳಾಕುಳಿಯಲ್ಲಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗರ ಸಮುದಾಯ ಭವನದ ಸ್ಥಳಕ್ಕೆ ಕೇಂದ್ರ ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಇತ್ತೀಚೆಗೆ ಭೇಟಿ ನೀಡಿದರು.

ಒಕ್ಕಲಿಗರ ಸಂಘಟನೆ ವತಿಯಿಂದ ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಬಳಿಕ ಸಮುದಾಯ ಭವನಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಾಯಿತು. ಬಳಿಕ ಮಾತನಾಡಿದ ಅನಂತಕುಮಾರ ‘ಕೇಂದ್ರ ಸರ್ಕಾರದಿಂದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಪ್ರಯತ್ನಿಸುವೆ’ ಎಂದು ಭರವಸೆ ನೀಡಿದರು.

ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಎಚ್.ಗೌಡ, ಶಂಭು ಗೌಡ, ತಾಲ್ಲೂಕು ಪಂಚಾಯ್ತಿ ಸದಸ್ಯ ಗಣಪಯ್ಯ ಗೌಡ, ಚಿತ್ತಾರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಗಣಪತಿ ಗೌಡ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ, ಬಿಜೆಪಿ ಮುಖಂಡ ಉಮೇಶ ನಾಯ್ಕ, ಸುನೀಲ್ ನಾಯ್ಕ, ವಿನೋದ ನಾಯ್ಕ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry