ವೋಲ್ವೊ ಬಸ್‌ ಎಂಜಿನ್‌ನಲ್ಲಿ ಬೆಂಕಿ: ಪ್ರಯಾಣಿಕರು ಪಾರು

ಸೋಮವಾರ, ಜೂನ್ 17, 2019
27 °C

ವೋಲ್ವೊ ಬಸ್‌ ಎಂಜಿನ್‌ನಲ್ಲಿ ಬೆಂಕಿ: ಪ್ರಯಾಣಿಕರು ಪಾರು

Published:
Updated:

ಉಡುಪಿ: ಪರ್ಕಳದಿಂದ ಮಂಗಳೂರಿಗೆ ಗುರುವಾರ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೋಲ್ವೊ ಬಸ್‌ ಹಿಂಭಾಗದ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡು ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು. ಸಾರ್ವಜನಿಕರೊಬ್ಬರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ತಿರುವಿನಲ್ಲಿ ಬಸ್‌ ಎಂಜಿನ್‌ನಿಂದ ಹೊಗೆಯೇಳುತ್ತಿರುವುದನ್ನು ನೋಡಿದ ಸಾರ್ವಜನಿಕರೊಬ್ಬರು ಚಾಲಕನಿಗೆ ತಿಳಿಸಿದ್ದಾರೆ. ಚಾಲಕ ತಕ್ಷಣವೇ ಬಸ್‌ ನಿಲ್ಲಿಸಿ ಅದರಲ್ಲಿದ್ದ 15 ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಎಂಜಿನ್‌ನಲ್ಲಿ ಹೊಗೆಯಾಡುತ್ತಿದ್ದ ಬೆಂಕಿಯನ್ನು ಅರಿಸಲು ಸ್ಥಳೀಯರು ನೆರವಾಗಿದ್ದಾರೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry