39ನೇ ವಸಂತಕ್ಕೆ ಕಾಲಿಟ್ಟ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್‌

ಬುಧವಾರ, ಜೂನ್ 19, 2019
31 °C

39ನೇ ವಸಂತಕ್ಕೆ ಕಾಲಿಟ್ಟ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್‌

Published:
Updated:
39ನೇ ವಸಂತಕ್ಕೆ ಕಾಲಿಟ್ಟ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್‌

ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್‌ ಶುಕ್ರವಾರ 39ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ(ಐಸಿಸಿ), ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ), ಹಿರಿಯ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್, ರಹಾನೆ ಸೇರಿದಂತೆ ಹಲವು ಗಣ್ಯರು ಟ್ವೀಟ್‌ ಮಾಡಿ ಶುಭ ಹಾರೈಸಿದ್ದಾರೆ.

*

*

ಅನಿಲ್‌ ಕುಂಬ್ಳೆ ಭಾರತ ತಂಡದ ಕೋಚ್‌ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ವಿರೇಂದ್ರ ಸೆಹ್ವಾಗ್‌ ಅವರು ಕೋಚ್‌ ಆಗಿ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದವು. ಆದರೆ, ಬಿಸಿಸಿಐನ ಸಚಿನ್‌, ಗಂಗೂಲಿ, ವಿ.ವಿ. ಎಸ್‌ ಲಕ್ಷ್ಮಣ್‌ ನೇತೃತ್ವದ ಆಯ್ಕೆ ಸಮಿತಿ ರವಿಶಾಸ್ತ್ರಿ ಅವರನ್ನು ಭಾರತ ತಂಡದ ಪ್ರಮುಖ ಕೋಚ್‌ ಆಗಿ ನೇಮಿಸಿತ್ತು.

ವಿರೇಂದ್ರ ಸೆಹ್ವಾಗ್‌ 2015ರ ಅ.20ರಂದು ಅಂತರರಾಷ್ಟ್ರೀಯ ಕ್ರಿಕೆಟಿನ ಎಲ್ಲ ಮಾದರಿಯ ಆಟಕ್ಕೂ ವಿದಾಯ ಘೋಷಿಸಿದ್ದಾರೆ. ಜತೆಗೆ, ಐಪಿಎಲ್‌ ಟೂರ್ನಿಯಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡ ಪರ ಆಡಿದ್ದರು. 2017ರ ಐಪಿಎಲ್‌ನಲ್ಲಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ಸಲಹೆಗಾರರಾಗಿ ಕಾಣಿಸಿಕೊಂಡಿದ್ದರು.  

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry