ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಪರೀಕ್ಷೆ ನಡೆಸಿ

Last Updated 20 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಸಾರ್ವಜನಿಕ ಶಿಕ್ಷಣ ಇಲಾಖೆಯು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದು ಸ್ವಾಗತಾರ್ಹ. ಆದರೆ ನೇಮಕಾತಿಯನ್ನು ಆಯಾ ಕಾಲೇಜುಗಳ ಸಮಿತಿಗೆ ವಹಿಸುವ ಬದಲು ಸರ್ಕಾರವೇ ಪ್ರವೇಶ ಪರೀಕ್ಷೆಯನ್ನು ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಒಳಿತು.

ಖಾಸಗಿ ಕಾಲೇಜುಗಳು ಹಲವು ಪ್ರಭಾವಿ ವ್ಯಕ್ತಿಗಳು, ಜಾತಿ ಮುಖಂಡರು ಅಥವಾ ಸಂಘ–ಸಂಸ್ಥೆಗಳ ಒಡೆತನದಲ್ಲಿದ್ದು, ನೇಮಕಾತಿ ಸಂದರ್ಭದಲ್ಲಿ ಆಯಾ ವರ್ಗದ ಅಭ್ಯರ್ಥಿಗಳಿಗೆ ಪ್ರಾತಿನಿಧ್ಯ ನೀಡುವ ಸಾಧ್ಯತೆ ಇರುತ್ತದೆ. ಇದರಿಂದ ಇತರ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಕೂಡಲೇ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಚಿವರು ಇದರ ಬಗ್ಗೆ ಗಮನಹರಿಸಬೇಕು.
ಹನುಮಂತರಾಜು,
ನೆಲಮಂಗಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT