ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್ ನೆಪ ಹೇಳಿ ಪಡಿತರ ನಿರಾಕರಿಸುವಂತಿಲ್ಲ: ಪಾಸ್ವಾನ್

Last Updated 20 ಅಕ್ಟೋಬರ್ 2017, 15:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪಡಿತರ ಚೀಟಿಯನ್ನು ಆಧಾರ್ ಜೊತೆ ಜೋಡಿಸಿಲ್ಲ ಎಂಬ ಕಾರಣವೊಡ್ಡಿ ಆಹಾರ ಭದ್ರತೆ ಕಾಯ್ದೆಯಡಿ ನೀಡುವ ಪಡಿತರ ಸೌಲಭ್ಯವನ್ನು ನಿರಾಕರಿಸುವಂತಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಸಾರ್ವಜನಿಕ ವಿತರಣೆ ಸಚಿವ ರಾಮ್‌ವಿಲಾಸ್ ಪಾಸ್ವಾನ್ ಸ್ಪಷ್ಟಪಡಿಸಿದ್ದಾರೆ.

ಜಾರ್ಖಂಡ್‌ನಲ್ಲಿ 11 ವರ್ಷದ ಬಾಲಕಿಯೊಬ್ಬಳು ಪಡಿತರ ಸಿಗದ ಕಾರಣ ಹಸಿವಿನಿಂದ ಮೃತಪಟ್ಟ ವರದಿ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ತನಿಖೆಗೂ ಅವರು ಆದೇಶಿಸಿದ್ದಾರೆ.

ಜಂಟಿ ಕಾರ್ಯದರ್ಶಿ ಹುದ್ದೆಯ ಅಧಿಕಾರಿಯೊಬ್ಬರನ್ನು ಜಾರ್ಖಂಡ್‌ಗೆ ಕಳುಹಿಸಲಾಗಿದೆ. ಪಡಿತರ ವಿತರಣೆಯಲ್ಲಿ ಯಾರಿಂದ ಲೋಪ ಆಗಿದೆ ಎಂಬುದನ್ನು ಪತ್ತೆಹಚ್ಚುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT