ಶುಕ್ರವಾರ, ಸೆಪ್ಟೆಂಬರ್ 20, 2019
28 °C

ಸಾಮೂಹಿಕ ಅತ್ಯಾಚಾರ ಎಸಗಿ ಬಾಲಕಿಯ ಹತ್ಯೆ

Published:
Updated:
ಸಾಮೂಹಿಕ ಅತ್ಯಾಚಾರ ಎಸಗಿ ಬಾಲಕಿಯ ಹತ್ಯೆ

ಲಖನೌ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕಿ ಮೇಲೆ ಐವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ.

ಒಬ್ಬ ಆರೋಪಿಯನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದನಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ಬಾಲಕಿ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಬಹಳ ಸಮಯವಾದರೂ ಬಾಲಕಿಯು ಮನೆಗೆ ಬಾರದ್ದನ್ನು ಗಮನಿಸಿದ ಪೋಷಕರು ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಬುಧವಾರ ಸಂಜೆ ವೇಳೆಗೆ ಗ್ರಾಮಕ್ಕೆ ಸಮೀಪದ ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ‘ದೇಹದ ಅನೇಕ ಭಾಗಗಳಲ್ಲಿ ಗಾಯದ ಗುರುತುಗಳಿವೆ. ಮುಖವನ್ನು ಕಚ್ಚಿದ ಗುರುತುಗಳೂ ಇವೆ. ದೇಹಕ್ಕೆ ಹಲವು ಬಾರಿ ಇರಿಯಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ. ಕುತ್ತಿಗೆಯಲ್ಲಿ ಗುರುತುಗಳಿದ್ದು, ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದಿದ್ದಾರೆ.

Post Comments (+)