ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕರ್ನಾಟಕದಿಂದ ಸಿ.ಎಂ. ಸ್ಪರ್ಧೆ?

ಕಾಂಗ್ರೆಸ್‌ ಮುಖಂಡರ ಒತ್ತಡ
Last Updated 20 ಅಕ್ಟೋಬರ್ 2017, 20:10 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಕರ್ನಾಟಕದ ಯಾವುದಾದರೂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆ ಭಾಗದ ಕಾಂಗ್ರೆಸ್‌ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ಎಚ್‌.ವೈ.ಮೇಟಿ ಅವರ ಬಾಗಲಕೋಟೆ, ಚಿಮ್ಮನಕಟ್ಟಿ ಆಯ್ಕೆಯಾಗಿರುವ ಬದಾಮಿ, ಜೆ.ಟಿ.ಪಾಟೀಲರ ಬೀಳಗಿ ಅಥವಾ ರಾಘವೇಂದ್ರ ಹಿಟ್ನಾಳ ಅವರ ಕೊಪ್ಪಳ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮುಖ್ಯಮಂತ್ರಿ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿದೆ.

‘ಸಿದ್ದರಾಮಯ್ಯ ಉತ್ತರ ಕರ್ನಾಟಕದಿಂದ ಸ್ಪರ್ಧಿಸಿದರೆ ಆ ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್‌ ಪಕ್ಷಕ್ಕೆ ಅನುಕೂಲ ಆಗಲಿದೆ’ ಎಂಬ ಆಲೋಚನೆ ಪಕ್ಷದ ನಾಯಕರಿಗಿದೆ. ಮುಖ್ಯಮಂತ್ರಿ ಈ ಬಗ್ಗೆ ಇನ್ನೂ ಬಹಿರಂಗವಾಗಿ ಯಾವುದೇ ನಿಲುವು ವ್ಯಕ್ತಪಡಿಸಿಲ್ಲ.

ಆದರೆ, ಮೈಸೂರಿನಲ್ಲಿ ಇತ್ತೀಚೆಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ, ‘ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ. ಇದು ನನಗೆ ರಾಜಕೀಯವಾಗಿ ಜನ್ಮ ಮತ್ತು ಮರುಜನ್ಮ ನೀಡಿದ ಕ್ಷೇತ್ರ. ಈ ಕ್ಷೇತ್ರದ ಮತದಾರರ ಜೊತೆಗೆ ನನಗೆ ಭಾವನಾತ್ಮಕ ಸಂಬಂಧ ಇದೆ’ ಎಂದು ಹೇಳಿದ್ದರು.

‘ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರಿರುವುದು ನಿಜ. ಆದರೆ, ಇನ್ನೂ ತೀರ್ಮಾನ ಆಗಿಲ್ಲ. ಚುನಾವಣೆಗೆ ಸಾಕಷ್ಟು ಸಮಯ ಇರುವುದರಿಂದ ಮುಖ್ಯಮಂತ್ರಿ ಸೂಕ್ತ ತೀರ್ಮಾನ ಕೈಗೊಳ್ಳಬಹುದು’ ಎಂದು ಆ ಭಾಗದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT