ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ರದ್ದು: ಜೋಶಿ

Last Updated 20 ಅಕ್ಟೋಬರ್ 2017, 19:57 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಟಿಪ್ಪು ಸುಲ್ತಾನ್‌ ನಾಡು ಮತ್ತು ಕನ್ನಡದ ದ್ರೋಹಿ. ಅಲ್ಲದೆ, ಹಿಂದೂಗಳ ವಿರೋಧಿ. ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಲಾಗುವುದು’ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಇತಿಹಾಸವನ್ನು ಅಳಿಸಿ ಹಾಕಿದವನು ಟಿಪ್ಪು. ಕೊಡಗು ಜಿಲ್ಲಾ ಪಂಚಾಯ್ತಿಯು ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬಾರದು ಎಂದು ಕೇಳಿಕೊಂಡರೂ, ರಾಜ್ಯ ಸರ್ಕಾರ ಅದನ್ನು ಒಪ್ಪಲಿಲ್ಲ. ಇದರಿಂದ ಶಾಂತಿ ಕದಡುತ್ತಿದೆ’ ಎಂದು ಅವರು ಅಭಿಪ್ರಾಯಪಟ್ಟರು.

‘ಆಮಂತ್ರಣ ಪತ್ರದಲ್ಲಿ ಹೆಸರು ಬೇಡ’
ಕಾರವಾರ (ಉತ್ತರ ಕನ್ನಡ): ನವೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ ನಡೆಯಲಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಆಮಂತ್ರಣ ಪತ್ರದಲ್ಲಿ ತಮ್ಮ ಹೆಸರು ನಮೂದಿಸಬಾರದು ಎಂದು ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

ಈ ಸಂಬಂಧ ಸಚಿವರ ಆಪ್ತ ಸಹಾಯಕ ರಮೇಶ್‌ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಆಪ್ತ ಕಾರ್ಯದರ್ಶಿಗೆ ಅಕ್ಟೋಬರ್‌ 14ರಂದು ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT