‌ಬೈಕ್‌ಗಳಿಗೆ ಕಾರಿನಿಂದ ಗುದ್ದಿ ಪುಂಡಾಟಿಕೆ

ಮಂಗಳವಾರ, ಜೂನ್ 25, 2019
29 °C
ಬನಶಂಕರಿಯ ನಾಗೇಂದ್ರ ಬ್ಲಾಕ್‌ನಲ್ಲಿ ನಡೆದ ಪ್ರಕರಣ

‌ಬೈಕ್‌ಗಳಿಗೆ ಕಾರಿನಿಂದ ಗುದ್ದಿ ಪುಂಡಾಟಿಕೆ

Published:
Updated:
‌ಬೈಕ್‌ಗಳಿಗೆ ಕಾರಿನಿಂದ ಗುದ್ದಿ ಪುಂಡಾಟಿಕೆ

ಬೆಂಗಳೂರು: ಬನಶಂಕರಿಯ ನಾಗೇಂದ್ರ ಬ್ಲಾಕ್‌ನ 11ನೇ ಮುಖ್ಯರಸ್ತೆಯಲ್ಲಿ ಅ.14 ರಂದು ಮಧ್ಯಾಹ್ನ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗಳಿಗೆ ಗುದ್ದಿ ಪುಂಡಾಟಿಕೆ ನಡೆಸಿದ್ದಾರೆ.

ಕೆಂಪು ಬಣ್ಣದ ಕಾರಿನಲ್ಲಿ ವೇಗವಾಗಿ ಬಂದ ದುಷ್ಕರ್ಮಿಗಳು ರಸ್ತೆ ನಿಲ್ಲಿಸಿದ್ದ ಸ್ಕೂಟರ್‌ಗೆ ಗುದ್ದಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬೈಕ್ ಸಹ ಕೆಳಗೆ ಬಿದ್ದಿದೆ. ಸುಮಾರು 50 ಅಡಿಯಷ್ಟು ದೂರ ಸ್ಕೂಟರ್ ಅನ್ನು ಕಾರಿನಿಂದಲೇ ತಳ್ಳಿಕೊಂಡು ಹೋಗಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ಅದರ ಸಂಪೂರ್ಣ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

ಪುಂಡಾಟಿಕೆಯನ್ನು ಪ್ರಶ್ನಿಸಿದ್ದಕ್ಕೆ ಅವರು ಧಮ್ಕಿ ಹಾಕಿದ್ದರು. ಹಾಡ ಹಗಲೇ ಈ ಕೃತ್ಯ ನಡೆದಿದ್ದರಿಂದ ಭಯಗೊಂಡಿದ್ದೇವೆ. ಗಿರಿನಗರ, ಹನುಮಂತ

ನಗರ, ಬಸವನಗುಡಿ ಹಾಗೂ ಬಸವನಗುಡಿ ಠಾಣಾ ವ್ಯಾಪ್ತಿಯಲ್ಲಿ ಇಂಥ ಘಟನೆಗಳು ಪದೇ ಪದೇ ನಡೆಯುತ್ತಿವೆ. ಕೆಲ ದಿನಗಳ ಹಿಂದಷ್ಟೇ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಾರುಗಳ ಗಾಜುಗಳನ್ನು ಒಡೆದಿದ್ದರು. ಆದರೆ, ಪೊಲೀಸರು ಇದುವರೆಗೂ ಕ್ರಮ

ಕೈಗೊಂಡಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಕಾರಿನ ನೋಂದಣಿ ಸಂಖ್ಯೆ ಸ್ಪಷ್ಟವಾಗಿಲ್ಲ. ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನೂ ಪರಿಶೀಲಿಸುತ್ತಿದ್ದೇವೆ. ತ್ವರಿತ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಬನಶಂಕರಿ ಸಂಚಾರ ಪೊಲೀಸರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry