ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಂಡಾಗಳ ಅಭಿವೃದ್ಧಿಗೆ ಒತ್ತು: ಶಾಸಕ

Last Updated 21 ಅಕ್ಟೋಬರ್ 2017, 5:44 IST
ಅಕ್ಷರ ಗಾತ್ರ

ಕೊಳ್ಳೇಗಾಲ: ‘ತಾಂಡಾಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ’ ಎಂದು ಶಾಸಕ ಆರ್. ನರೇಂದ್ರ ಹೇಳಿದರು. ತಾಲ್ಲೂಕಿನ ಜಾಗೇರಿ ವ್ಯಾಪ್ತಿಯ ರಾಶಿಬೋಳಿ ತಾಂಡಾದಲ್ಲಿ ಶುಕ್ರವಾರ ಸೇವಾಲಾಲ್‌ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ತಾಲ್ಲೂಕಿನ ಹನೂರು ವ್ಯಾಪ್ತಿಯ ನಾಲ್ಕು ತಾಂಡಾಗಳಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಲಂಬಾಣಿ ಜನಾಂಗಕ್ಕಾಗಿ ತಾಂಡಾ ಅಭಿವೃದ್ಧಿ ನಿಗಮದ ಅನುದಾನದಡಿ ₹ 12 ಲಕ್ಷ ಅಂದಾಜು ವೆಚ್ಚದ ಸೇವಾಲಾಲ್‌ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

3 ತಿಂಗಳೊಳಗೆ ಭವನ ನಿರ್ಮಾಣ ಪೂರ್ಣಗೊಳಿಸಬೇಕು. ಜನರು ಈ ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದ್ದಂತೆ ನಡೆದುಕೊಂಡು ಸಾಧನೆಗೈದಿದೆ. ಪಕ್ಷದ ಸಾಧನೆಯನ್ನು ಮುಂದಿಟ್ಟು ಮತ್ತೆ ಆಶೀರ್ವಾದ ಕೇಳುತ್ತಿದ್ದೇವೆ ಎಂದು ತಿಳಿಸಿದರು.

ತಾ.ಪಂ. ಅಧ್ಯಕ್ಷ ರಾಜು, ಸದಸ್ಯ ಅರುಣ್‍ ಕುಮಾರ್, ಗ್ರಾ.ಪಂ.ಅಧ್ಯಕ್ಷೆ ಮಂಜುಳಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಪಯ್ಯ, ಮುಖಂಡ ಮಾದೇಗೌಡ, ಯಜಮಾನರಾದ ಮೈಲುಸ್ವಾಮಿ, ರಾಮ್‌ಜೀನಾಯ್ಕ, ರಾಜನಾಯ್ಕ, ಪೊನ್ನುಸ್ವಾಮಿನಾಯ್ಕ, ಚೆಲ್ಲಮುತ್ತು, ಬಲರಾಮನಾಯ್ಕ, ಸಂತೋಷ್ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಪಳನಿಸ್ವಾಮಿ ಜಾಗೇರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT