‘ಸಿದ್ದರಾಮಯ್ಯ, ಪರಮೇಶ್ವರ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ’

ಸೋಮವಾರ, ಮೇ 27, 2019
24 °C

‘ಸಿದ್ದರಾಮಯ್ಯ, ಪರಮೇಶ್ವರ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ’

Published:
Updated:
‘ಸಿದ್ದರಾಮಯ್ಯ, ಪರಮೇಶ್ವರ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ’

ಕಲಬುರ್ಗಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ’ ಎಂದು ಕೆಪಿಸಿಸಿ ಉಪಾಧ್ಯಕ್ಷ

ಎಚ್.ಟಿ.ಸಾಂಗ್ಲಿಯಾನ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತ ನೀಡುತ್ತಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯು ಸಿದ್ದರಾಮಯ್ಯ ನೇತೃತ್ವದಲ್ಲೇ ನಡೆಯಲಿದೆ. ಈ ವಿಷಯದಲ್ಲಿ ಹೈಕಮಾಂಡ್ ಸ್ಪಷ್ಟವಾಗಿದೆ’ ಎಂದು ಪ್ರಶ್ನೆ ಯೊಂದಕ್ಕೆ ಉತ್ತರಿಸಿದರು.

‘ಮುಂಬರುವ ವಿಧಾನ ಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷವು ಶೇ 90ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಸರ್ಕಾರದ ಅನೇಕ ಯೋಜನೆಗಳು ಸಮಾಜದ ಕಟ್ಟಕಡೆಯ ಫಲಾನುಭವಿಗೂ ತಲುಪಿವೆ. ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಸರ್ಕಾರ ಉತ್ತಮ ಸಾಧನೆ ಮಾಡಿದೆ. ಹೀಗಾಗಿ ರಾಜ್ಯದ ಜನತೆ ಈ ಬಾರಿಯೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ’ ಎಂದರು.

‘ಸಂಸದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಮುಖಂಡರಾದ ದಿ.ಎನ್.ಧರ್ಮಸಿಂಗ್ ಹಾಗೂ ಖಮರುಲ್ ಇಸ್ಲಾಂ ಅವರು ಈ ಭಾಗದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ.

ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಮನೆ ಮನೆಗೆ ಕಾಂಗ್ರೆಸ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ಕರ್ನಾಟಕ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣಗೌಡ ಪಾಟೀಲ ಸಂಕನೂರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry