ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟಿಪ್ಪು ಜಯಂತಿ: ಆಮಂತ್ರಣ ಪತ್ರದಲ್ಲಿ ಹೆಸರು ಬೇಡ’

Last Updated 21 ಅಕ್ಟೋಬರ್ 2017, 7:14 IST
ಅಕ್ಷರ ಗಾತ್ರ

ಕಾರವಾರ (ಉತ್ತರ ಕನ್ನಡ): ನವೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ ಜರುಗಲಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಆಮಂತ್ರಣ ಪತ್ರದಲ್ಲಿ ತಮ್ಮ ಹೆಸರು ನಮೂದಿಸಬಾರದು ಎಂದು ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

ಈ ಸಂಬಂಧ ಸಚಿವರ ಆಪ್ತ ಸಹಾಯಕ ರಮೇಶ್‌ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಆಪ್ತ ಕಾರ್ಯದರ್ಶಿಗೆ ಅಕ್ಟೋಬರ್‌ 14ರಂದು ಪತ್ರ ಬರೆದಿದ್ದಾರೆ.

ಸಚಿವರ ನಿರ್ದೇಶನದ ಮೇರೆಗೆ ಈ ಪತ್ರ ಬರೆದಿದ್ದು, ಜಯಂತಿ ಆಚರಿಸುವ ಎಲ್ಲ ಇಲಾಖೆಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಈ ಕುರಿತು ತಿಳಿಸುವಂತೆ ಅವರು ಕೋರಿದ್ದಾರೆ. ಕಳೆದ ಬಾರಿ ಕೂಡ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಅನಂತಕುಮಾರ್ ಇದೇ ರೀತಿ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT