ಬೇರೆ ಪಕ್ಷಗಳತ್ತ ತಿರುಗಿಯೂ ನೋಡಲ್ಲ: ಡಾ.ಜಿ.ಪರಮೇಶ್ವರ್

ಸೋಮವಾರ, ಜೂನ್ 24, 2019
26 °C

ಬೇರೆ ಪಕ್ಷಗಳತ್ತ ತಿರುಗಿಯೂ ನೋಡಲ್ಲ: ಡಾ.ಜಿ.ಪರಮೇಶ್ವರ್

Published:
Updated:
ಬೇರೆ ಪಕ್ಷಗಳತ್ತ ತಿರುಗಿಯೂ ನೋಡಲ್ಲ: ಡಾ.ಜಿ.ಪರಮೇಶ್ವರ್

ತುಮಕೂರು: ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನ ನೀಡಿ ಗೌರವದಿಂದ ನಡೆಸಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಗಳತ್ತ ತಿರುಗಿಯೂ ನೋಡಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.‌ಜಿ.ಪರಮೇಶ್ವರ್ ಹೇಳಿದರು.

ಈಚೆಗೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್‌ನಲ್ಲಿ ಡಾ.ಪರಮೇಶ್ವರ್ ಅವರನ್ನು ಗೌರವದಿಂದ ನೋಡಿಕೊಳ್ಳುತ್ತಿಲ್ಲ ಎಂಬ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಸಿ.ಟಿ.ರವಿ ಅವರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲವೇನೊ ಆ ಕಾರಣಕ್ಕಾಗಿ ನನ್ನ ಬಗ್ಗೆ ಇಂತಹ ಹೇಳಿಕೆ ನೀಡಿದ್ದಾರೆ ಎಂದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದಲೆ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಸ್ಪರ್ಧೆ ಖಚಿತ. ಎಲ್ಲಿಂದ ಸ್ಪರ್ಧಿಸುತ್ತೇನೆ ಎಂಬುದನ್ನು ಮುಂದೆ ಹೇಳುತ್ತೇನೆ. ಚುನಾವಣೆ ಇನ್ನೂ ದೂರ ಇದೆ. ಆಗ ಹೇಳುತ್ತೇನೆ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry