ಉತ್ತರಪ್ರದೇಶ: ದುಷ್ಕರ್ಮಿಗಳಿಂದ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ

ಸೋಮವಾರ, ಮೇ 20, 2019
32 °C

ಉತ್ತರಪ್ರದೇಶ: ದುಷ್ಕರ್ಮಿಗಳಿಂದ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ

Published:
Updated:
ಉತ್ತರಪ್ರದೇಶ: ದುಷ್ಕರ್ಮಿಗಳಿಂದ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ

ಉತ್ತರಪ್ರದೇಶ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಹಾಗೂ ಸ್ಥಳೀಯ ಪತ್ರಕರ್ತ ರಾಜೇಶ್‌ ಮಿಶ್ರಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯ ಕರಾಂದ ಪ್ರದೇಶದಲ್ಲಿ ನಡೆದಿದೆ.

ರಾಜೇಶ್‌ ಕರಾಂದ ಪಟ್ಟಣದಲ್ಲಿ ಸಣ್ಣ ಅಂಗಡಿಯನ್ನು ಹೊಂದಿದ್ದು, ಎಂದಿನಂತೆ ಸಹೋದರನೊಂದಿಗೆ ಅಂಗಡಿಗೆ ತೆರಳಿದ್ದರು. ಈ ವೇಳೆ ಬೈಕ್‌ನಲ್ಲಿ ಮುಖ ಮುಚ್ಚಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ರಾಜೇಶ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಕ್ಕದಲ್ಲಿದ ರಾಜೇಶ್‌ ಸಹೋದರ ಕೂಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜೇಶ್‌ ಈ ಪ್ರದೇಶದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಸಕ್ರಿಯರಾಗಿದರು ಎನ್ನಲಾಗಿದೆ. 

*

ಒಂದು ವಾರದ ಹಿಂದಷ್ಟೆ ಪಂಜಾಬ್‌ನ ಲೂಧಿಯಾನದಲ್ಲಿ ಆರ್‌ಎಸ್‌ಎಸ್‌ನ ಹಿರಿಯ ನಾಯಕ ರವೀಂದ್ರ ಗೋಸಾಯಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಸದ್ಯ ಪಂಜಾಬ್‌ ಸರ್ಕಾರ ರವೀಂದ್ರ ಗೋಸಾಯಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿದ್ದು, ತನಿಖೆ ಮುಂದುವರಿದಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry