ಎತ್ತಿನಹಳ್ಳಿ ಗ್ರಾಮದ ರಸ್ತೆ ದುರಸ್ತಿಗೆ ಒತ್ತಾಯ

ಬುಧವಾರ, ಜೂನ್ 19, 2019
28 °C

ಎತ್ತಿನಹಳ್ಳಿ ಗ್ರಾಮದ ರಸ್ತೆ ದುರಸ್ತಿಗೆ ಒತ್ತಾಯ

Published:
Updated:

ವೈ.ಎನ್.ಹೊಸಕೋಟೆ: ಹೋಬಳಿಯ ಎತ್ತಿನಹಳ್ಳಿ ಗ್ರಾಮದ ರಸ್ತೆಯಲ್ಲಿ ಎಲ್ಲೆಂದರಲ್ಲಿ ಗುಂಡಿ ಬಿದ್ದಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಈಚೆಗೆ ಬಿದ್ದ ಮಳೆ ನೀರು ಗುಂಡಿಗಳಲ್ಲಿ ನಿಂತಿದೆ. ವಾಹನಗಳೂ ಗುಂಡಿಗಳಲ್ಲಿ ಎದ್ದು ಬಿದ್ದು ಸಾಗುತ್ತಿವೆ.

‘ವಾಹನಗಳು ಸಂಚರಿಸುವಾಗ ಕೆಸರು ನೀರು ಸಾರ್ವಜನಿಕರಿಗೆ ಸಿಡಿಯುತ್ತದೆ. ನಮ್ಮ ಮನೆಗಳಿಗೂ ನೀರು ಸಿಡಿಯುತ್ತದೆ. ಶಾಲೆಗಳ ಕಂಪೌಂಡ್ ಗೋಡೆಗಳು ಅಂದಗಟ್ಟಿವೆ’ ಎಂದು ರಸ್ತೆ ಪಕ್ಕದ ನಿವಾಸಿಗಳು ಸಮಸ್ಯೆ ವಿವರಿಸುತ್ತಾರೆ.

‘ದ್ವಿಚಕ್ರ ವಾಹನ ಸವಾರರು ಈ ರಸ್ತೆ ಗುಂಡಿಗಳಲ್ಲಿ ಬಿದ್ದಿರುವ ಉದಾಹರಣೆಗಳು ಇವೆ. ಸಂಬಂಧಿಸಿದ ಇಲಾಖೆಯವರು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು. ಬೇಗ ರಸ್ತೆ ದುರಸ್ತಿ ಮಾಡಬೇಕು’ ಎಂದು ಸ್ಥಳೀಯರಾದ ರಾಮಾಂಜಿ, ನವೀನ್, ನಾಗೇಂದ್ರಪ್ಪ ಒತ್ತಾಯಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry