‘ಸಿ.ಎಂ ಹರಾಮ್‌ ಕೆಲಸ ಮಾಡುತ್ತಿದ್ದಾರೆ’

ಭಾನುವಾರ, ಜೂನ್ 16, 2019
32 °C

‘ಸಿ.ಎಂ ಹರಾಮ್‌ ಕೆಲಸ ಮಾಡುತ್ತಿದ್ದಾರೆ’

Published:
Updated:
‘ಸಿ.ಎಂ ಹರಾಮ್‌ ಕೆಲಸ ಮಾಡುತ್ತಿದ್ದಾರೆ’

ಮೈಸೂರು: ‘ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರಾಮ್‌ ಕೆಲಸ ಮಾಡುತ್ತಿದ್ದಾರೆ’ ಎಂದು ಸಂಸದ ಪ್ರತಾಪಸಿಂಹ ಟೀಕಿಸಿದ್ದಾರೆ.

‘ಸಿದ್ದರಾಮಯ್ಯ ಅವರು ಮುಸ್ಲಿಂ ಧರ್ಮಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದ್ದಾರೆ. ಈ ಹರಾಮ್‌ ಕೆಲಸವನ್ನು ನಿಲ್ಲಿಸಬೇಕು. ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರದೊಂದಿಗೆ ಟಿಪ್ಪು ಜಯಂತಿಯೂ ಕೊನೆಯಾಗಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕದಂತೆ ಎರಡು ವರ್ಷಗಳ ಹಿಂದೆಯೇ ಕೊಡಗು ಜಿಲ್ಲಾಧಿಕಾರಿಗೆ ನಾನು, ಶಾಸಕರಾದ ಅಪ್ಪಚ್ಚುರಂಜನ್‌, ಕೆ.ಜಿ.ಬೋಪಯ್ಯ ಪತ್ರ ಬರೆದಿದ್ದೆವು. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ ಅವರ ನಿಲುವಿಗೆ ನಮ್ಮ ಸಹಮತವಿದೆ’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry