ರಫ್ತು ಶೇ 25 ರಷ್ಟು ಹೆಚ್ಚಳ

ಬುಧವಾರ, ಜೂನ್ 19, 2019
22 °C

ರಫ್ತು ಶೇ 25 ರಷ್ಟು ಹೆಚ್ಚಳ

Published:
Updated:
ರಫ್ತು ಶೇ 25 ರಷ್ಟು ಹೆಚ್ಚಳ

ನವದೆಹಲಿ: ದೇಶದ ರಫ್ತು ವಹಿವಾಟು ಸೆಪ್ಟೆಂಬರ್‌ನಲ್ಲಿ ಶೇ 25.67 ರಷ್ಟು ಏರಿಕೆ ಕಂಡಿದ್ದು, ಆರು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಒಟ್ಟಾರೆ ₹1.85 ಲಕ್ಷ ಕೋಟಿ ಮೌಲ್ಯದ ಸರಕುಗಳು ರಫ್ತಾಗಿವೆ.

ಈ ಹಿಂದೆ ಮಾರ್ಚ್‌ ತಿಂಗಳಿನಲ್ಲಿ ಶೇ 27.5 ರಷ್ಟು ಗರಿಷ್ಠ ಮಟ್ಟದ ಪ್ರಗತಿ ಕಂಡಿತ್ತು. ರಾಸಾಯನಿಕ, ಪೆಟ್ರೋಲಿಯಂ ಮತ್ತು ಎಂಜಿನಿಯರಿಂಗ್ ಉತ್ಪನ್ನಗಳ ರಫ್ತು ಪ್ರಮಾಣ ಹೆಚ್ಚಾಗಿರುವುದರಿಂದ ಈ ಪ್ರಗತಿ ಸಾಧ್ಯವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ.

ಆಮದು ವಹಿವಾಟು ಸಹ ಶೇ 18.09 ರಷ್ಟು ಹೆಚ್ಚಾಗಿದ್ದು, ಒಟ್ಟು ₹2.44 ಲಕ್ಷ ಕೋಟಿ ಮೌಲ್ಯದ ಸರಕುಗಳು ಆಮದಾಗಿವೆ.

ವ್ಯಾಪಾರ ಕೊರತೆ ಅಂತರ (ರಫ್ತು ಮತ್ತು ಆಮದು ನಡುವಣ ಅಂತರ) ₹58,500 ಕೋಟಿಗಳಿಂದ ₹58,370 ಕೋಟಿಗಳಿಗೆ ಅಲ್ಪ ಇಳಿಕೆ ಕಂಡಿದೆ. ಚಿನ್ನದ ಆಮದು ಶೇ 5 ರಷ್ಟು ತಗ್ಗಿದ್ದು, ₹11,115 ಕೋಟಿ ಮೌಲ್ಯದ ಚಿನ್ನ ಆಮದು ಮಾಡಿಕೊಳ್ಳಲಾಗಿದೆ.

ತೈಲ ಮತ್ತು ತೈಲಯೇತರ ಉತ್ಪನ್ನಗಳ ಆಮದು ಕ್ರಮವಾಗಿ ಶೇ 18.47 ಮತ್ತು ಶೇ 17.98 ರಷ್ಟು ಏರಿಕೆಯಾಗಿದೆ. ಏಪ್ರಿಲ್‌–ಸೆಪ್ಟೆಂಬರ್ ಅವಧಿಯಲ್ಲಿ ರಫ್ತು ವಹಿವಾಟು ಶೇ 11.52 ರಷ್ಟು ಮತ್ತು ಆಮದು ಶೇ 25.08 ರಷ್ಟು ಏರಿಕೆಯಾಗಿದೆ.ಇನ್ನೂ ಹೆಚ್ಚಿನ ಪ್ರಗತಿ ನಿರೀಕ್ಷೆ

ಜಿಎಸ್‌ಟಿಗೆ ಸಂಬಂಧಿಸಿದಂತೆ ರಫ್ತುದಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ವಹಿವಾಟು ಇನ್ನಷ್ಟು ಏರಿಕೆ ಕಾಣಲಿದೆ ಎಂದು ಭಾರತೀಯ ರಫ್ತುದಾರರ ಸಂಘಟನೆಗಳ ಒಕ್ಕೂಟ (ಎಫ್‌ಐಇಒ) ವಿಶ್ವಾಸ ವ್ಯಕ್ತಪಡಿಸಿದೆ.

ಜಾಗತಿಕ ವಿದ್ಯಮಾನಗಳು, ರೂಪಾಯಿ ಮೌಲ್ಯದಲ್ಲಿ ಏರಿಳಿತ ಮತ್ತು ಕೆಲವು ದೇಶಗಳ ವ್ಯಾಪಾರ ರಕ್ಷಣಾ ನೀತಿಗಳು ದೇಶದ ರಫ್ತು ವಹಿವಾಟಿನ ಪ್ರಗತಿಗೆ ಅಡ್ಡಿಯಾಗಿವೆ ಎಂದು ಒಕ್ಕೂಟದ ಅಧ್ಯಕ್ಷ ಗಣೇಶ್‌ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ರಫ್ತು ವಹಿವಾಟು ₹20.15 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry