ವಿಜಯಶಂಕರ್‌ ಮನವೊಲಿಸಲು ಬಿಜೆಪಿ ಕಸರತ್ತು

ಭಾನುವಾರ, ಮೇ 19, 2019
32 °C

ವಿಜಯಶಂಕರ್‌ ಮನವೊಲಿಸಲು ಬಿಜೆಪಿ ಕಸರತ್ತು

Published:
Updated:
ವಿಜಯಶಂಕರ್‌ ಮನವೊಲಿಸಲು ಬಿಜೆಪಿ ಕಸರತ್ತು

ಮೈಸೂರು: ಬಿಜೆಪಿ ತೊರೆಯಲು ಮುಂದಾಗಿರುವ ಹಿರಿಯ ಮುಖಂಡ ಸಿ.ಎಚ್‌.ವಿಜಯಶಂಕರ್‌ ಅವರ ಮನವೊಲಿಸುವ ಕಸರತ್ತು ಮುಂದುವರಿದಿದೆ.

62ನೇ ವರ್ಷಕ್ಕೆ ಕಾಲಿರಿಸಿದ ಅವರನ್ನು ಶನಿವಾರ ನಗರದ ಮನೆಯಲ್ಲಿ ಭೇಟಿಯಾದ ಸಂಸದ ಪ್ರತಾಪಸಿಂಹ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಶುಭಕೋರಿದರು. ಅಲ್ಲದೆ, ಪಕ್ಷದಲ್ಲೇ ಉಳಿಯುವಂತೆ ಮನವಿ ಮಾಡಿದರು.

‘ಪಿರಿಯಾಪಟ್ಟಣ ಕ್ಷೇತ್ರದ ಟಿಕೆಟ್‌ ವಿಚಾರದಲ್ಲಿ ಗೊಂದಲಕ್ಕೆ ಒಳಗಾಗಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಶಕ್ತಿ ಇರುವುದು ವಿಜಯಶಂಕರ್‌ ಅವರಿಗೆ ಮಾತ್ರ. ಪಕ್ಷ ತೊರೆಯದಂತೆ ಮನವಿ ಮಾಡಿದ್ದೇವೆ’ ಎಂದು ಪ್ರತಾಪಸಿಂಹ ಹೇಳಿದರು.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ಹೊಂದಿರುವ ಅವರು ಕಳೆದ ಎರಡು ವರ್ಷಗಳಿಂದ ಈ ಭಾಗದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಆದರೆ, ಪಕ್ಷದ ವಿರುದ್ಧ ಪದೇಪದೇ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಈ ಗೊಂದಲಕ್ಕೆ ಕಾರಣವಾಗಿದೆ.‌

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry