ರಾಜ್ಯದಲ್ಲಿ ಒಟ್ಟು 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಅವುಗಳಲ್ಲಿ 112 ಕಾಲೇಜುಗಳಿಗೆ ಕೊಠಡಿ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಇದೆ. ಇದಕ್ಕಾಗಿ ₹3 ಸಾವಿರ ಕೋಟಿ ಮೊತ್ತದ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಇವುಗಳ ಜತೆಗೆ ರಾಜ್ಯದ 25 ಸರ್ಕಾರಿ ವಿಶ್ವವಿದ್ಯಾಲಯಗಳ ಮೂಲಸೌಕರ್ಯದ ಕೊರತೆ ಎದುರಿಸುತ್ತಿದ್ದು, ಇದಕ್ಕೆ ಸುಮಾರು ₹2 ಸಾವಿರ ಕೋಟಿ ಅಗತ್ಯವಿದೆ. ಒಟ್ಟಾರೆ ₹5 ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ನೀಡಲಾಗುವುದು ಎಂದು ವಿವರಿಸಿದರು.