ಬರಗೂರು ಕುರಿತ ವಿಚಾರ ಸಂಕಿರಣ 25 ರಂದು

ಬುಧವಾರ, ಜೂನ್ 19, 2019
25 °C

ಬರಗೂರು ಕುರಿತ ವಿಚಾರ ಸಂಕಿರಣ 25 ರಂದು

Published:
Updated:

ಬೆಂಗಳೂರು: ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು 70 ವರ್ಷಗಳನ್ನು ಪೂರೈಸಿದ ಪ್ರಯುಕ್ತ ಬರಗೂರು ಆತ್ಮೀಯರ ಬಳಗ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟದ ಆಶ್ರಯದಲ್ಲಿ ‘ರಾಜ್ಯಮಟ್ಟದ ವಿಚಾರ ಸಂಕಿರಣ’ವನ್ನು ಇದೇ 25ರಂದು ಆಯೋಜಿಸಲಾಗಿದೆ.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಳಗದ ಸಂಚಾಲಕ ಡಾ.ರಂಗಾರೆಡ್ಡಿ ಕೋಡಿರಾಂಪುರ, ‘ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಸಂಸದ ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಲಿದ್ದಾರೆ.

ಬರಗೂರರ ಕುರಿತ ‘ಬೆವರು ಬರೆದ ಬರಹ’ (ಬೈರಮಂಗಲ ರಾಮೇಗೌಡ), ಶಬರಿ (ಆಂಗ್ಲಾನುವಾದ: ಡಾ.ಬಸವರಾಜ ಡೋಣೂರ), ‘ಸಾಹಿತ್ಯ ಸಮ್ಮೇಳ ನಾಧ್ಯಕ್ಷರಾಗಿ ಬರಗೂರು’ (ಡಾ.ಕರಿಯಪ್ಪ ಮಾಳಿಗೆ) ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ ಬಿಡುಗಡೆ ಮಾಡಲಿದ್ದಾರೆ’ ಎಂದರು.

‘ನಮ್ಮೊಳಗಿನ ಬರಗೂರರ ಸಾಹಿತ್ಯ ಮತ್ತು ಸಿನಿಮಾ ಪ್ರಜ್ಞೆ ಕುರಿತ ಗೋಷ್ಠಿ ಹಾಗೂ ಕವಿಗೋಷ್ಠಿ ನಡೆಯಲಿವೆ. ಸಂಜೆ 5.30ಕ್ಕೆ ನಡೆಯುವ ಸಮಾರೋಪದಲ್ಲಿ ಅಖಿಲ ಭಾರತ 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚಂದ್ರಶೇಖರ ಪಾಟೀಲ ಅವರಿಗೆ ಗೌರವ ಸಮರ್ಪಿಸಲಿದ್ದೇವೆ.

ಮಧ್ಯಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಕುಲಪತಿ ಡಾ.ತೇಜಸ್ವಿ ಕಟ್ಟಿಮನಿ ಹಾಗೂ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮುರಿಗೆಪ್ಪ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry