ಗುಂಡಿಕ್ಕಿ ಆರ್‌ಎಸ್ಎಸ್ ಕಾರ್ಯಕರ್ತನ ಹತ್ಯೆ

ಬುಧವಾರ, ಜೂನ್ 19, 2019
28 °C

ಗುಂಡಿಕ್ಕಿ ಆರ್‌ಎಸ್ಎಸ್ ಕಾರ್ಯಕರ್ತನ ಹತ್ಯೆ

Published:
Updated:
ಗುಂಡಿಕ್ಕಿ ಆರ್‌ಎಸ್ಎಸ್ ಕಾರ್ಯಕರ್ತನ ಹತ್ಯೆ

ಗಾಜಿಪುರ, ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜೇಶ್ ಮಿಶ್ರಾ (40) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಜೇಶ್ ಅವರನ್ನು ಉಳಿಸಲು ಯತ್ನಿಸಿದ ಸೋದರನಿಗೂ ಗಾಯಗಳಾಗಿವೆ.

ಪತ್ರಕರ್ತರೂ ಆಗಿರುವ ರಾಜೇಶ್ ತಮ್ಮ ಸಹೋದರ ಅಮಿತೇಶ್ ಮಿಶ್ರಾ ಜೊತೆ ಶುಕ್ರವಾರ ಬೆಳಗ್ಗೆ ಇಲ್ಲಿನ ಬ್ರಾಹ್ಮಣಪುರ ಛತ್ತಿಯ ಅಂಗಡಿಯಲ್ಲಿ ಕುಳಿತಿದ್ದಾಗ ಮೂವರು ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಶ್ ಅವರ ತಲೆಗೆ ಹಾಗೂ ಅಮಿತೇಶ್ ಅವರ ಹೊಟ್ಟೆಗೆ ಗುಂಡು ತಾಗಿದೆ. ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ರಾಜೇಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಅಮಿತೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಾರಾಣಸಿಗೆ ಕರೆದೊಯ್ಯಲು ಸೂಚಿಸಲಾಯಿತು.

ಹಂತಕರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸುವುದಾಗಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿ ಆನಂದ್ ಕುಮಾರ್ ಅವರು ಲಖನೌದಲ್ಲಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry