ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

ಗುರುವಾರ , ಜೂನ್ 20, 2019
26 °C

ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

Published:
Updated:

ಬೆಂಗಳೂರು: ಕೆ.ಆರ್.ಪುರ ಸಮೀಪದ ಕೃಷ್ಣಾನಗರದಲ್ಲಿ ಕಟ್ಟಡದ ಕಾಮಗಾರಿ ವೇಳೆ ವಿದ್ಯುತ್‌ ಪ್ರವಹಿಸಿ ಚನ್ನಸಂದ್ರದ ವಿ.ನಾಗಭೂಷಣ್‌ (33) ಎಂಬುವರು ಮೃತಪಟ್ಟಿದ್ದಾರೆ.

‘ಪುರುಷೋತ್ತಮ್‌ ಎಂಬುವರಿಗೆ ಸೇರಿದ ಕಟ್ಟಡದ ಮೂರನೇ ಮಹಡಿಯಲ್ಲಿ ಮೋಲ್ಡಿಂಗ್‌ಗಾಗಿ ಕಂಬಿ ಕಟ್ಟುವ ಕೆಲಸದಲ್ಲಿ ನಾಗಭೂಷಣ್‌ ಹಾಗೂ ಗಜೇಂದ್ರ ನಿರತರಾಗಿದ್ದರು. ಮನೆ ಮೇಲೆ ಹಾದು ಹೋಗಿರುವ ಹೈಟೆನ್ಷನ್‌ ತಂತಿಗೆ ಕಂಬಿಯು ತಗುಲಿದೆ. ಇದರಿಂದ ವಿದ್ಯುತ್‌ ಪ್ರವಹಿಸಿದ್ದು, ನಾಗಭೂಷಣ್‌ ಸುಟ್ಟು ಕರಕಲಾಗಿದ್ದಾರೆ. ಗಜೇಂದ್ರ ಅವರಿಗೂ ಸುಟ್ಟ ಗಾಯಗಳಾಗಿವೆ. ಪುರುಷೋತ್ತಮ್‌ ಹಾಗೂ ‌ಮೇಸ್ತ್ರಿ ರವಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಪೊಲೀಸರು ತಿಳಿಸಿದರು.

‘ಕಟ್ಟಡದ ಮಾಲೀಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಕಾರಣ ಈ ಅವಘಡ ಸಂಭವಿಸಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry