ಕೆಎಸ್‌ಸಿಎಗೆ ಜಮೀನು ಹಸ್ತಾಂತರ

ಮಂಗಳವಾರ, ಜೂನ್ 18, 2019
23 °C

ಕೆಎಸ್‌ಸಿಎಗೆ ಜಮೀನು ಹಸ್ತಾಂತರ

Published:
Updated:

ಹಾಸನ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ) ನೂತನವಾಗಿ ನಿರ್ಮಿಸಿರುವ ಎಸ್.ಎಂ.ಕೃಷ್ಣ ಬಡಾವಣೆಯಲ್ಲಿ ಅಂತರರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ 14 ಎಕರೆ ಜಾಗವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಶನಿವಾರ ಪಶುಸಂಗೋಪನೆ ಸಚಿವ ಎ.ಮಂಜು ಹಸ್ತಾಂತರಿಸಿದರು.

‘36 ತಿಂಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಬೇಕು’ ಎಂದು ಸಚಿವರು ಮನವಿ ಮಾಡಿದರು. 453 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣವಾಗಿದೆ. ಕೆಎಸ್‌ಸಿಎ ಅಧ್ಯಕ್ಷ ಸಂಜಯ್ ದೇಸಾಯಿ ಅವರಿಗೆ ಒಪ್ಪಂದ ಪತ್ರ ನೀಡಲಾಯಿತು. ಸಮಾರಂಭದಲ್ಲಿ ಕರ್ನಾಟಕ ರಣಜಿ ತಂಡದ ನಾಯಕ  ಆರ್. ವಿನಯಕುಮಾರ್ ಮತ್ತು ಸಹ ಆಟಗಾರರನ್ನು ಅಭಿನಂದಿಸಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry