ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾನೂನು ಸುವ್ಯವಸ್ಥೆ; ಪೊಲೀಸರ ಪಾತ್ರ ಮಹತ್ವದ್ದು’

Last Updated 22 ಅಕ್ಟೋಬರ್ 2017, 6:04 IST
ಅಕ್ಷರ ಗಾತ್ರ

ಕಾರವಾರ: ‘ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು. ದೇಶದ ಗಡಿ ಕಾಯುವ ಸೈನಿಕರಂತೆ ನಾಡಿನ ಒಳಗೆ ಅವರು ರಕ್ಷಣೆ ನೀಡುತ್ತಾರೆ’ ಎಂದು ಜಿಲ್ಲಾ ನ್ಯಾಯಾಧೀಶ ವಿ.ಎಸ್‌.ಧಾರವಾಡಕರ್ ಹೇಳಿದರು. ಪೊಲೀಸ್‌ ಹುತಾತ್ಮರ ದಿನಾಚರಣೆ ನಿಮಿತ್ತ ಇಲ್ಲಿನ ಪೊಲೀಸ್‌ ಪರೇಡ್‌ ಮೈದಾನದಲ್ಲಿನ ಪೊಲೀಸ್‌ ಹುತಾತ್ಮರ ಸ್ಮಾರಕಕ್ಕೆ ಶನಿವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದರು.]

‘ಹಗಲು, ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ. ಅವರು ಇರುವುದರಿಂದಲೇ ಜನರು ಶಾಂತಿ, ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ’ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಹೆಚ್ಚುವರಿ ಎಸ್ಪಿ ಗೋಪಾಲ ಬ್ಯಾಕೋಡ, ‘ಅಕ್ಟೋಬರ್ 21, 1959ರಂದು ಚೀನಾ– ಭಾರತದ ಗಡಿಭಾಗ ಲಡಾಖ್‌ನಲ್ಲಿ ನಡೆದ ಹೋರಾಟದಲ್ಲಿ 10 ಮಂದಿ ಭಾರತೀಯ ಪೊಲೀಸರು ಮೃತಪಟ್ಟಿದ್ದರು. ಅವರನ್ನು ಸ್ಮರಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತಿದೆ’ ಎಂದು ಹೇಳಿದರು.

ಮೌನಾಚರಣೆ: ಕರ್ತವ್ಯ ನಿರ್ವಹಿಸುವಾಗ ಮಡಿದ ಪೊಲೀಸರ ಸ್ಮರಣಾರ್ಥ ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು. ಗೋಪಾಲ ಬ್ಯಾಕೋಡ್, ಡಿವೈಎಸ್ಪಿ ಪ್ರಮೋದರಾವ್ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದರು.

ಈ ವೇಳೆ ಸಶಸ್ತ್ರ ಮೀಸಲು ಪಡೆಯ ತುಕಡಿಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಅರ್ಪಿಸಲಾಯಿತು. ಪೊಲೀಸ್ ವಾದ್ಯ ತಂಡದಿಂದ ರಾಷ್ಟ್ರಗೀತೆ ಮೊಳಗಿತು. ಬಳಿಕ ಪೊಲೀಸ್ ಧ್ವಜವನ್ನು ಅರ್ಧಕ್ಕೆ ಇಳಿಸಿ ಆನಂತರ ಮೇಲೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT