ಟಿಪ್ಪು ಜಯಂತಿಯಲ್ಲಿ ಬಿಜೆಪಿ ರಾಜಕೀಯ: ಸಿದ್ದರಾಮಯ್ಯ ಆರೋಪ

ಶನಿವಾರ, ಮೇ 25, 2019
22 °C

ಟಿಪ್ಪು ಜಯಂತಿಯಲ್ಲಿ ಬಿಜೆಪಿ ರಾಜಕೀಯ: ಸಿದ್ದರಾಮಯ್ಯ ಆರೋಪ

Published:
Updated:
ಟಿಪ್ಪು ಜಯಂತಿಯಲ್ಲಿ ಬಿಜೆಪಿ ರಾಜಕೀಯ: ಸಿದ್ದರಾಮಯ್ಯ ಆರೋಪ

ಮಂಗಳೂರು: ಟಿಪ್ಪು ಜಯಂತಿ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಬಂಟ್ವಾಳದಲ್ಲಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.

ಕೆಜೆಪಿ ಪಕ್ಷ ಸ್ಥಾಪಿಸಿದ್ದ ಯಡಿಯೂರಪ್ಪ, ಟಿಪ್ಪು ವೇಷ ತೊಟ್ಟು, ಖಡ್ಗ ಹಿಡಿದು ಪೋಜು ನೀಡಿದ್ದರು. ಆಗ ಶೋಭಾ ಕರಂದ್ಲಾಜೆ ಕೂಡ ಇದ್ದರು. ವಿಶ್ರಾಂತ ಕುಲಪತಿ ಶೇಖ್ ಅಲಿಯವರು ಟಿಪ್ಪು ಕುರಿತು ಬರೆದ ಪುಸ್ತಕಕ್ಕೆ ಆಗಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮುನ್ನುಡಿ ಬರೆದಿದ್ದರು. ಆಗ ಟಿಪ್ಪು ಸುಲ್ತಾನ್ ದೇಶಭಕ್ತ ಎಂದು ಕರೆದಿದ್ದ ಶೆಟ್ಟರ, ಈಗ ರಾಗ ಬದಲಿಸಿದ್ದಾರೆ. ಇದು ಬಿಜೆಪಿ ಮುಖಂಡರ ನಿಜವಾದ ಬಣ್ಣ ಎಂದು ಹೇಳಿದರು.

ಇತಿಹಾಸ ತಿಳಿದುಕೊಳ್ಳದವರಿಂದ, ಚರಿತ್ರೆಯನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದ ಅವರು, ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ದೇಶಭಕ್ತ. ಅದಕ್ಕಾಗಿಯೇ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸುತ್ತಿದೆ ಎಂದು ಸಮರ್ಥಿಸಿಕೊಂಡರು.

ಧರ್ಮಗಳ ನಡುವೆ ಸಂಘರ್ಷ ಉಂಟುಮಾಡಿ, ರಾಜಕೀಯ ಮಾಡುವುದು ಸಂವಿಧಾನಕ್ಕೆ ಮಾಡುವ ಅಪಚಾರ ಎಂಬುದನ್ನು ಕೋಮುವಾದಿಗಳು ಅರ್ಥಮಾಡಿಕೊಳ್ಳಬೇಕು ಎಂದು ಸಿಎಂ ಹೇಳಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry