ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟರನ್ನೆಲ್ಲ ಬಂಧಿಸಿದರೆ ಜೈಲು ಸಾಲದು

Last Updated 22 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ದೇಶದಲ್ಲಿ ಸಾಕಷ್ಟು ಮಂದಿ ಭ್ರಷ್ಟರಿದ್ದಾರೆ. ಅವರನ್ನೆಲ್ಲಾ ಬಂಧಿಸಿದರೆ ಇಡೀ ದೇಶವನ್ನು ಜೈಲು ಮಾಡಬೇಕಾಗುತ್ತದೆ. ಅವರ ವಿರುದ್ಧ ಒಂದೆರಡು ತಿಂಗಳು ಹೋರಾಡಿದರೆ ಸಾಲದು. ಈ ಹೋರಾಟ ನಿರಂತರವಾಗಿರಬೇಕು’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಹೇಳಿದರು.

ಬಂಟರ ಸಂಘದ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ದೀಪಾವಳಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಲೋಕಾಯುಕ್ತ ಸಂಸ್ಥೆ ಹಾಗೂ ಲೋಕಾಯುಕ್ತರಿಂದ ಮಾತ್ರ ಭ್ರಷ್ಟಾಚಾರವನ್ನು ತಡೆಗಟ್ಟಲು ಸಾಧ್ಯವಿಲ್ಲ. ಅದಕ್ಕೆ ಜನರ ಸಹಕಾರ ಅತ್ಯಗತ್ಯ. ಜನರು ಭ್ರಷ್ಟ ಅಧಿಕಾರಿಗಳ ಹಾಗೂ ರಾಜಕಾರಣಿಗಳ ವಿರುದ್ಧ ಸೆಟೆದು ನಿಲ್ಲಬೇಕು. ನಾವಿದನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಬೇಕು’ ಎಂದರು.

‘ಲೋಕಾಯುಕ್ತನಾಗುವ ಕನಸನ್ನೂ ನಾನು ಕಂಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನನ್ನ ಹೆಸರನ್ನು ಶಿಫಾರಸು ಮಾಡಿದ್ದರು. ಅಧಿಕಾರ ವಹಿಸಿಕೊಂಡ ಬಳಿಕ 23 ಜಿಲ್ಲೆಗಳ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಭೇಟಿ ಮಾಡಿ ಆಡಳಿತ ಸುಧಾರಣೆ ಬಗ್ಗೆ ಚರ್ಚಿಸಿದ್ದೇನೆ. ಅದರ ಪರಿಣಾಮ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ’ ಎಂದು ಹೇಳಿದರು.

ಸಂಘದ ಅಧ್ಯಕ್ಷ ಡಿ.ಚಂದ್ರಹಾಸ ರೈ, ‘ಸಂಘದ ವತಿಯಿಂದ ವೃದ್ಧಾಶ್ರಮ ಪ್ರಾರಂಭಿಸುವ ಚಿಂತನೆ ಇದ್ದು, ಸಂಘದ ಸದಸ್ಯರು ಮಾರ್ಗದರ್ಶನ ನೀಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT